Sandalwood Leading OnlineMedia

ಅಮೇಜಾನ್ ಪ್ರೈಮ್ ಗೆ ಲಗ್ಗೆ ಇಟ್ಟ ರಾಷ್ಟ್ರಪ್ರಶಸ್ತಿ ವಿಜೇತ ‘ಡೊಳ್ಳು’ ಸಿನಿಮಾ

 
ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ಸ್ಯಾಂಡಲ್ ವುಡ್ ಅಂಗಳಕ್ಕೆ ನೀಡಿರುವ ಪ್ರತಿಭಾವಂತ ನಿರ್ದೇಶಕ ಪವನ್ ಒಡೆಯರ್. ನಿರ್ದೇಶನ, ಬರವಣಿಗೆ ಜೊತೆಗೆ ಸಿನಿಮಾ ನಿರ್ಮಾಣವನ್ನು ಆರಂಭಿಸಿರುವ ಇವರು ನಿರ್ಮಾಣ ಮಾಡಿದ ಮೊದಲ ಸಿನಿಮಾದಲ್ಲೇ ಸಂಚಲನ ಸೃಷ್ಟಿಸಿದ್ರು. ಚೊಚ್ಚಲ ನಿರ್ಮಾಣದ ‘ಡೊಳ್ಳು’ ಸಿನಿಮಾ ರಾಷ್ಟ್ರಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಅಂತರಾಷ್ಟ್ರೀಯ ಮನ್ನಣೆಯನ್ನು ಪಡೆದುಕೊಂಡಿದೆ. ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿತ್ತು. ಹೀಗೆ ಎಲ್ಲರ ಹೆಮ್ಮೆಗೆ ಪಾತ್ರವಾದ ‘ಡೊಳ್ಳು’ ಸಿನಿಮಾ ಚಿತ್ರಮಂದಿರದಲ್ಲೂ ಸಿನಿ ಪ್ರೇಮಿಗಳ ಮನಗೆದ್ದಿತ್ತು. ಇದೀಗ ಒಟಿಟಿಗೂ ಲಗ್ಗೆ ಇಟ್ಟಿದ್ದು ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಗೊಂಡಿದೆ.

 
ಹೆಸರೇ ಹೇಳುವಂತೆ ಡೊಳ್ಳು ಕುಣಿತದ ಸುತ್ತ ನಮ್ಮ ನೆಲದ ಜಾನಪದ ಸೊಗಡನ್ನು ಮುಖ್ಯವಾಗಿಟ್ಟುಕೊಂಡು ಹೆಣೆದ ಕಥೆ ಈ ಚಿತ್ರದ ಜೀವಾಳ. ಒಡೆಯರ್ ಮೂವೀಸ್ ಬ್ಯಾನರ್ ನಲ್ಲಿ ನಿರ್ಮಾಣವಾದ ಈ ಚಿತ್ರ ರಾಷ್ಟ್ರ ಪ್ರಶಸ್ತಿ ಪಡೆಯುದರೊಂದಿಗೆ ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಮಾಮೂಲಿ ಕಮರ್ಶಿಯಲ್ ಸಿನಿಮಾಗಳ ನಡುವೆ ಜಾನಪದ ಕಲೆಯ ಕಾಳಜಿ ಕುರಿತಾದ ಈ ಚಿತ್ರ ಸಾಗರ್ ಪುರಾಣಿಕ್ ನಿರ್ದೇಶನದ ಮೊದಲ ಸಿನಿಮಾ.
 
ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಬು ಹಿರಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಒಳಗೊಂಡ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಎಂ ಸಂಗೀತ, ಅಭಿಲಾಶ್ ಕಲಥಿ ಕ್ಯಾಮೆರಾ ನಿರ್ದೇಶನ, ಬಿ ಎಸ್ ಕೆಂಪರಾಜು ಸಂಕಲನ ಡೊಳ್ಳು ಚಿತ್ರಕ್ಕಿದೆ. ಚಿತ್ರಮಂದಿರದಲ್ಲಿ ಡೊಳ್ಳು ಸಿನಿಮಾ ಮಿಸ್ ಮಾಡಿಕೊಂಡವರು ಅಮೇಜಾನ್ ಪ್ರೈಮ್ ನಲ್ಲಿ ನೋಡಬಹುದಾಗಿದೆ.

Share this post:

Related Posts

To Subscribe to our News Letter.

Translate »