Sandalwood Leading OnlineMedia

ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ

ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವೀಸ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಸಿನಿಮಾ ಡೊಳ್ಳು. ಡೊಳ್ಳು ಕುಣಿತದ ಸುತ್ತ ಎಣೆದಿರುವ ಈ ಚಿತ್ರಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಹರಿದು ಬಂದಿದೆ. ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಡೊಳ್ಳು ಸಿನಿಮಾ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಪಡೆದುಕೊಂಡಿದೆ. ಇಷ್ಟೆಲ್ಲಾ ಯಶಸ್ಸಿಗೆ ಕಾರಣದವರಿಗೆ ಇಡೀ ಚಿತ್ರತಂಡ ಧನ್ಯವಾದ ಅರ್ಪಿಸಿದೆ.

ಒಡೆಯರ್ ಮೂವೀಸ್ ನಡಿ ನಿರ್ಮಾಣದ ಮಾಡಿರುವ ಮೊದಲ ಸಿನಿಮಾವಾಗಿದ್ದು, ನಾನು ನನ್ನ ಪತ್ನಿ, ಸ್ನೇಹಿತರಾದ ಹರೀಶ್ ನಾರಾ, ಸಚಿನ್ ತಪಶೆಟ್ಟಿ, ನರಸಿಂಹ ಜೊತೆಗೂಡಿ ಚಿತ್ರ ನಿರ್ಮಾಣ ಮಾಡಿದ್ದೇವೆ. ಇದು ನಿಜವಾದ ಸಿನಿಮಾ. ಇಡೀ ತಂಡ  ಸೇರಿಕೊಂಡು ತುಂಬಾ ಅದ್ಭುತ ಸಿನಿಮಾ ಮಾಡಿದ್ದಾರೆ. ನಿರ್ಮಾಪಕನಾಗಿ ನನಗೂ ಇದು ಹೊಸ ಅನುಭವ. ಸಿನಿಮಾದ ವಿಶೇಷ ಅಂದ್ರೆ ಇಡೀ ಡೊಳ್ಳು ಕಲಾವಿದರು ಅಭಿನಯಿಸಿರುವ ಚಿತ್ರ ಇದಾಗಿದೆ ಎಂದು ನಿರ್ಮಾಪಕ ಪವನ್ ಒಡೆಯರ್ ಅಭಿಪ್ರಾಯ ಹಂಚಿಕೊಂಡರು.

 

ಇಂತಹ ಅವಕಾಶ ಮಾಡಿಕೊಟ್ಟಿದ್ದಕ್ಕೆ ಪವನ್ ಸರ್ ಗೆ ಧನ್ಯವಾದ. ಕಿರುಚಿತ್ರಗಳನ್ನು ನಿರ್ದೇಶನ ಮಾಡಿದವರಿಗೆ ಸಿನಿಮಾ ಮಾಡುವುದು ದೊಡ್ದ ಸಾಹಸ. ಆ ಸಾಹಸ ಮಾಡುವುದಕ್ಕೆ ಇಡೀ ತಂಡ ಸಪೋರ್ಟ್ ಮಾಡಿದೆ. ಈ ಯಶಸ್ಸಿಗೆ ಕಾರಣವರಾದ ಎಲ್ಲರಿಗೂ ಧನ್ಯವಾದ ಎಂದು ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಅನಿಸಿಕೆ ಹಂಚಿಕೊಂಡರು.

 

ಸಾಗರ್ ಪುರಾಣಿಕ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿರುವ ಡೊಳ್ಳು ಚಿತ್ರದಲ್ಲಿ ಕಿರುತೆರೆ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ನಾಯಕ-ನಾಯಕಿಯಾಗಿ ನಟಿಸಿದ್ದು, ಬಾಬು ಹಿರಣಯ್ಯ, ಚಂದ್ರ ಮಯೂರ್ ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅನಂತ್ ಕಾಮತ್ ಸಂಗೀತ, ಅಭಿಲಾಷ್ ಕಲಾಥಿ ಕ್ಯಾಮೆರಾವಿರುವ ಡೊಳ್ಳು ಸಿನಿಮಾ ಸದ್ಯದಲ್ಲಿಯೇ ಥಿಯೇಟರ್ ಅಂಗಳಕ್ಕೆ ಲಗ್ಗೆ ಇಡಲಿದೆ.

Share this post:

Related Posts

To Subscribe to our News Letter.

Translate »