Sandalwood Leading OnlineMedia

ಪೃಥ್ವಿ ಅಂಬಾರ್ ನಟನೆಯ ‘ದೂರದರ್ಶನ’ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ.

ಪೃಥ್ವಿ ಅಂಬಾರ್ ನಟನೆಯ ‘ದೂರದರ್ಶನ’ ಸಿನಿಮಾದ ಶೂಟಿಂಗ್ ಕಂಪ್ಲೀಟ್…ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿ…

ದೂರದರ್ಶನ.. ಈ ಹೆಸ್ರು ಕೇಳಿದ ತಕ್ಷಣ ದೃಶ್ಯಗಳನ್ನು ಹಾಗೂ ಧ್ವನಿಯನ್ನು ಜಂಟಿಯಾಗಿ ಪ್ರಸಾರ ಮಾಡುವ ಮಾಯಾಪೆಟ್ಟಿಗೆ ಎಲ್ಲರಿಗೂ ನೆನಪಾಗುತ್ತದೆ. ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ನಡುವಿನ ಒಂದು ಚಿಕ್ಕ ಊರೊಳಗೆ ಟಿವಿ ಬಂದ ಮೇಲೆ ಹೇಗೆಲ್ಲಾ ಪ್ರಭಾವ ಬೀರುತ್ತದೆ. ಅಂದಿನ ಕಾಲ ಘಟ್ಟದಲ್ಲಿ ಇದ್ದಂತಹ ಹಲವಾರು ಪ್ರಚಲಿತ ವಿದ್ಯಮಾನಗಳನ್ನು ನೋಡುಗರು ಮೆಲುಕು ಹಾಕುವಂತೆ ಮಾಡುವ ಕಥಾಹಂದರ ಇರುವ ಸಿನಿಮಾ ತಯಾರಾಗಿದೆ ಅದುವೇ ದೂರದರ್ಶನ. ಆಕರ್ಷಕ ಶೀರ್ಷಿಕೆಯಡಿ ತಯಾರಾಗಿರುವ ಈ ಸಿನಿಮಾ 80ರ ದಶಕಕ್ಕೆ ನೋಡುಗರನ್ನು ಕರೆದೊಯ್ಯುವಂತೆ ಮಾಡುತ್ತದೆ ಎನ್ನುವುದು ಚಿತ್ರತಂಡದ‌ ಮಾತು.

ದಿಯಾ ಸಿನಿಮಾ ಮೂಲಕ ಪ್ರೇಕ್ಷಕರ ಮನೆ ಮನ ಗೆದ್ದಿರುವ ಮಂಗಳೂರಿನ ಪ್ರತಿಭೆ ಪೃಥ್ವಿ ಅಂಬರ್ ದೂರದರ್ಶನ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು, ಪೃಥ್ವಿಗೆ ಜೋಡಿಯಾಗಿ ಅಯಾನಾ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು ಕಾಣಿಸಿಕೊಂಡಿದ್ದು, ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ. ಟ್ರಂಕ್ ಸಿನಿಮಾದಲ್ಲಿ ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ, ಹಲವು ಕಿರುಚಿತ್ರಗಳನ್ನು ನಿರ್ದೇಶನ ಮಾಡಿರುವ ಸುಕೇಶ್ ಶೆಟ್ಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಸಿನಿಮಾಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಇದು ಇವರ ಮೊದಲ ಸಿನಿಮಾವಾಗಿದೆ.

ನೈಜ ಘಟನೆ ಹಾಗೂ ಕಾಲ್ಪನಿಕತೆ ಬೆರೆತ ಸಿನಿಮಾವಾಗಿರುವ ದೂರದರ್ಶನ ಚಿತ್ರೀಕರಣ ಮಂಗಳೂರು ಪುತ್ತೂರು ಮಧ್ಯದ ಆರ್ಲಪದವಿನಲ್ಲಿ 38 ದಿನಗಳ ಕಾಲ ನಡೆದಿದೆ. ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ಸಿನಿಮಾಗೆ ಬಂಡವಾಳ ಹೂಡಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಜವಾಬ್ದಾರಿಯನ್ನು ಉಗ್ರಂ ಮಂಜು ಹೊತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ. ದೂರದರ್ಶನ ಸಿನಿಮಾದಲ್ಲಿ ನಾಲ್ಕು ಹಾಡುಗಳು, ಎರಡು ಫೈಟ್ ಸೀನ್ಸ್ ಗಳಿದ್ದು, ಹೊಡೆದಾಟದ ದೃಶ್ಯಗಳನ್ನು ನೈಜ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. ಶೀರ್ಘದಲ್ಲಿಯೇ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.

Share this post:

Related Posts

To Subscribe to our News Letter.

Translate »