ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಇದನ್ನೂ ಓದಿ ಮಾರಕಾಸ್ತ್ರ !! ಇದು ಚಂದನವನದ ಹೈ ವೋಲ್ಟೇಜ್ ಚಿತ್ರ
ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.