Sandalwood Leading OnlineMedia

ಎ.ಪಿ.ಅರ್ಜುನ್ ನಿರ್ಮಾಣದಲ್ಲಿ ‘ಲಕ್ಷ್ಮೀ ಪುತ್ರ’ನಾದ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ

ಅಂಬಾರಿ, ಅದ್ಧೂರಿ, ಐರಾವತ, ರಾಟೆಯಂತಹ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮಂಸ್ ನಡಿ ಕಿಸ್, ಅದ್ಧೂರಿ ಲವರ್ಸ್ ನಂತಹ ಸದಭಿರುಚಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಇದೇ ಎಪಿ ಅರ್ಜುನ್ ಫಿಲ್ಮಂಸ್ ನ ಮೂರನೇ ಸಿನಿಮಾ ಅನೌನ್ಸ್ ಆಗಿದೆ.

ಎಪಿ ಅರ್ಜುನ್ ಒಡೆತನದ ಎಪಿ ಅರ್ಜುನ್ ಫಿಲ್ಮಂಸ್ ನಡಿ ಬರ್ತಿರುವ ಮೂರನೇ ಪ್ರಯತ್ನಕ್ಕೆ ಲಕ್ಷ್ಮೀಪುತ್ರ ಎಂಬ ಟೈಟಲ್ ಇಡಲಾಗಿದ್ದು, ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆಯುತ್ತಿದ್ದಾರೆ. ಲಕ್ಷ್ಮೀಪುತ್ರನಾಗಿ ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಅಭಿನಯಿಸುತ್ತಿದ್ದಾರೆ. ಎಪಿ ಅರ್ಜುನ್ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ವಿಜಯ್ ಎಸ್ ಸ್ವಾಮಿ ಈ ಸಿನಿಮಾ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ. ಅರ್ಜುನ್ ಅವರಿಂದ ನಿರ್ದೇಶನದ ಪಟುಗಳನ್ನು ಕಲಿತಿರುವ ವಿಜಯ್ ಅವರೀಗ ಪೂರ್ಣಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಹಾಗೂ ಸ್ಟಾರ್ ಡೈರೆಕ್ಟರ್ ಎಪಿ ಅರ್ಜುನ್ ಕಾಂಬೋದ ಮೊದಲ ಸಿನಿಮಾವನ್ನು ಅರ್ಜುನ್ ಮಡದಿ ಅನ್ನಪೂರ್ಣ ಎಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಲಕ್ಷ್ಮೀಪುತ್ರ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ರವಿಕಿರಣ್ ಗೌಡ ಸಹ ನಿರ್ಮಾಪಕರಾಗಿ ಸಾಥ್ ಕೊಡುತ್ತಿದ್ದಾರೆ. ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ಡಾ.ಕೆ.ರವಿ ವರ್ಮಾ ಸಾಹಸ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಲಕ್ಷ್ಮೀಪುತ್ರ ಚಿತ್ರಕ್ಕಿದೆ. ಎಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ, ರಾಜೇಶ್ ರಾವ್ ಸಹ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

ಇದೇ 24ಕ್ಕೆ ಲಕ್ಷ್ಮೀಪುತ್ರನಿಗೆ ಮುಹೂರ್ತ
ಲಕ್ಷ್ಮೀಪುತ್ರ ಎಂಬ ಕ್ಯಾಚಿ ಟೈಟಲ್ ನೊಂದಿಗೆ ಚಿಕ್ಕಣ್ಣ ಹಾಗೂ ಎಪಿ ಅರ್ಜುನ್ ಅಖಾಡಕ್ಕೆ ಇಳಿಯುತ್ತಿದ್ದು, ಇದೇ ತಿಂಗಳ 24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.

 

 

 

 

 

Share this post:

Related Posts

To Subscribe to our News Letter.

Translate »