Sandalwood Leading OnlineMedia

ನವೆಂಬರ್ 18ರಿಂದ ರಾಜ್ಯಾದ್ಯಂತ `ಅಬ್ಬರ’!

ಕೆ.ರಾಮ್‌ ನಾರಾಯಣ್ ಅವರ ನಿರ್ದೇಶನದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಚಿತ್ರ ಅಬ್ಬರ ದಿ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೂ ಮುನ್ನ ನಡೆದ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದ  ಚಿತ್ರತಂಡ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು. ಟೈಸನ್, ಕ್ರ‍್ಯಾಕ್ ನಂತರ ರಾಮ್‌ನಾರಾಯಣ್ ನಿರ್ದೇಶಿಸಿರುವ  ಚಿತ್ರ ಇದಾಗಿದ್ದು, ಸಿ. ಅಂಡ್ ಎಂ.ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಅವರು ನಿರ್ಮಿಸಿದ್ದಾರೆ.

 

 

“ತಿಮ್ಮಯ್ಯ & ತಿಮ್ಮಯ್ಯ” ಚಿತ್ರದಲ್ಲಿ ಅನಂತನಾಗ್ ಹಾಗೂ ದಿಗಂತ್

 

ಆ್ಯಕ್ಷನ್, ಫ್ಯಾಮಿಲಿ ಬಾಂಡಿಂಗ್, ಕಾಮಿಡಿ ಎಂಟರ್‌ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ತಂದೆ ಮಗನ ನಡುವಿನಭಾವನಾತ್ಮಕ  ಸಂಬಂಧ ಹಾಗೂ ಅದರ ಮಹತ್ವದ ಕುರಿತಂತೆ ಹೇಳಲಾಗಿದೆ.  ಪ್ರಜ್ವಲ್ ಜೊತೆ ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ.  ನಾಯಕ ತನ್ನ ಫ್ಯಾಮಿಲಿಗೋಸ್ಕರ ಏನೆಲ್ಲ ಮಾಡುತ್ತಾನೆ ಅನ್ನೋದನ್ನು ಪ್ರೇಕ್ಷಕರ ಮನಮುಟ್ಟುವ ಹಾಗೆ ನಿರೂಪಿಸಲಾಗಿದೆ. ತಂದೆ ಒಂದು ಒಂದು ತಪ್ಪು ಮಾಡ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಎಳೆ.

 

 

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವ’

 

ತಾನು ನಡೆಯುವ ದಾರಿ ಹೀಗೇ ಇರಬೇಕು ಅಂದುಕೊಂಡಿದ್ದರೂ  ಅದು ಹೋಗ್ತಾ ಹೋಗ್ತಾ ಕಳೆದುಹೋಗುತ್ತದೆ. ಮನುಷ್ಯ ಯಾವಾಗಲೂ ಜಾಗೃತನಾಗಿರಬೇಕು ಎನ್ನುವುದೇ  ಅಬ್ಬರ  ಚಿತ್ರದ ಸಂದೇಶ. ನಾಯಕ ಪ್ರಜ್ವಲ್ ಚಿತ್ರದಲ್ಲಿ  ಮೂರು ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ  2 ಡ್ಯುಯೆಟ್  ಹಾಡುಗಳನ್ನು ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗಿದೆ.

 

 

ರಾಜಹಂಸನ `ಕೆರೆಬೇಟೆ’ ಶುರು

 

ಶೋಭರಾಜ್, ರವಿಶಂಕರ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ ರವಿ ಬಸ್ರೂರು ಅವರ ಅದ್ಭುತ ಮ್ಯೂಸಿಕ್, ಜೆ.ಕೆ.ಗಣೇಶ್ ಅವರ  ಕ್ಯಾಮೆರಾವರ್ಕ್ ಚಿತ್ರಕ್ಕಿದೆ.

 

 

 

 

 

 

Share this post:

Related Posts

To Subscribe to our News Letter.

Translate »