Sandalwood Leading OnlineMedia

ಗೀತಾ ಶಿವರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು, ಕಾರಣವೇನು?

ಬಹುನಿರೀಕ್ಷಿತ `ಚಿತ್ತಾರ ಸ್ಟಾರ್ ಅವಾರ್ಡ್ಸ್-2025’ವೋಟಿಂಗ್ ಲೈನ್ ಓಪನ್ ಆಗಿದೆ, ಕೂಡಲೆ ನಿಮ್ಮ ನೆಚ್ಚಿನ ನಟ/ನಟಿ, ತಂತ್ರಜ್ಞರಿಗೆ ವೋಟ್ ಮಾಡಿ.

Send “Chittara” on WhatsApp to 73 5365 5365 or click the link 👉  http://wame.pro/chittara to cast your vote!

 


ಈಗ ತಾನೇ ಶಿವರಾಜ್‌ಕುಮಾರ್ ಕ್ಯಾನ್ಸರ್‌ನಿಂದ ಚೇತರಿಸಿಕೊಂಡಿದ್ದರು. ಅಮೆರಿಕದಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಹಿಂತಿರುಗಿದ್ದರು. ಇನ್ನೇನು ಚೇತರಿಸಿಕೊಳ್ಳುತ್ತಿದ್ದಾರೆ ಅನ್ನುವಾಗಲೇ ಪತ್ನಿ ಗೀತಾ ಶಿವರಾಜ್‌ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ವರದಿಯಾಗಿದೆ.

ಗೀತಾ ಶಿವರಾಜ್‌ಕುಮಾರ್ ಅವರಿಗೆ ಕಳೆದ ಕೆಲವು ದಿನಗಳಿಂದ ಕತ್ತಿನ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಸಂಬಂಧ ವೈದ್ಯರು ಅವರಿಗೆ ಕತ್ತಿನ ಭಾಗದಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಶಿವರಾಜ್‌ಕುಮಾರ್ ಆಗಲಿ, ಅವರ ಕುಟುಂಬ ಆಗಲಿ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಇನ್ನೂ ನೀಡಿಲ್ಲ.

ಶಿವಣ್ಣನ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರಿಗೆ ಕೆಲವು ದಿನಗಳಿಂದ ನರದ ಸಮಸ್ಯೆ ಇದ್ದಿದ್ದರಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಸರ್ಜರಿಗೆ ಮುಂದಾಗಿದ್ದರೆ ಎನ್ನಲಾಗಿದೆ. ಈ ಹಿಂದೆಯೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ, ಶಿವಣ್ಣ ಕೂಡ ಅನಾರೋಗ್ಯಕ್ಕೆ ಒಳಲಾಗಿದ್ದರಿಂದ ಪೋಸ್ಟ್‌ ಪೋನ್ ಆಗುತ್ತಲೇ ಇತ್ತು ಎನ್ನಲಾಗಿದ್ದು. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

 

 

Share this post:

Translate »