*”ಘೋಸ್ಟ್” ನಲ್ಲಿ ಮತ್ತೆ “ಬೀರ್ ಬಲ್ ” ಆದ ನಿರ್ದೇಶಕ ಶ್ರೀನಿ* .ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ “ಬೀರ್ ಬಲ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ “ಬೀರ್ ಬಲ್” ಚಿತ್ರದಲ್ಲಿ ಅಭಿನಯಿಸಿದ್ದರು.
ಇನ್ನೂ ಓದಿ ಒಂದು ಪ್ರೀತಿ ಕಥೆ ಹೇಳುವ ಇಬ್ಬರು ಪ್ರೇಮಿಗಳ ಮಾತಿನ ದೂರದ ಅಂತರ ಸಪ್ತ ಸಾಗರ;
ಈಗ ಈ ಚಿತ್ರದಲ್ಲಿ “ಬೀರ್ ಬಲ್” ಪಾತ್ರದಲ್ಲಿ ಅಭಿನಯಿಸಿರುವುದು, “ಬೀರ್ ಬಲ್ ” ಭಾಗ ೨ಬರಬಹುದಾ ? ಎಂಬ ಪ್ರಶ್ನೆ ಮೂಡಿದೆ. ಈಗಾಗಲೇ “ಘೋಸ್ಟ್” ಫಸ್ಟ್ ಲುಕ್, “BIG DADDY” ಟೀಸರ್ ಅಭಿಮಾನಿಗಳ ಮನ ಗೆದ್ದಿದೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಅಭಿಮಾನಿಗಳಲ್ಲಿ ಹೆಚ್ಚಿದೆ.ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.