Sandalwood Leading OnlineMedia

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌ ಸಿನಿಮಾಗೆ ಕಿಕ್ ಸ್ಟಾರ್ಟ್…ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಚಿತ್ರಕ್ಕೆ ಯುವಧೀರ ನಾಯಕ

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌ ಸಿನಿಮಾಗೆ ಕಿಕ್ ಸ್ಟಾರ್ಟ್…ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಚಿತ್ರಕ್ಕೆ ಯುವಧೀರ ನಾಯಕ

ಕಳೆದ ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿ ಸಂಭಾಷಣೆಕಾರನಾಗಿ ಗುರುತಿಸಿಕೊಂಡಿರುವ ಯುವಧೀರ, ಗುಡ್ ಗುಡ್ಡರ್ ಗುಡೆಸ್ಟ್ ಸಿನಿಮಾ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ. ನಿನ್ನೆ ಬೆಂಗಳೂರಿನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಜೀ ಕನ್ನಡದ ಡಿಕೆಡಿ ಶೋ ವಿನ್ನರ್ ಚೈತ್ರಾಲಿ ಕ್ಲ್ಯಾಪ್ ಮಾಡಿದ್ರೆ, ಬೂಸೆ ಗೌಡ ಎಂಬ ಭರತನಾಟ್ಯದಲ್ಲಿ ನ್ಯಾಷನಲ್ ಅವಾರ್ಡ್ ಪಡೆದ ಅಂಧರೊಬ್ಬರು ಕ್ಯಾಮೆರಾಗೆ ಚಾಲನೆ ನೀಡಿದರು.

ಕಳೆದ ಹದಿನೈದು ವರ್ಷಗಳಿಂದ ಸಿನಿಮಾಗಳಲ್ಲಿ ಸಂಭಾಷಣೆಕಾರನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮಿಂಚು, ಜಾನಿ ಜಾನಿ ಎಸ್ ಪಪ್ಪಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ಮೊದಲ ನಿರ್ದೇಶನ ಸಿನಿಮಾ. ಒಂದೇ ಕಥೆ ಮೂರು ಟ್ರ್ಯಾಕ್ ನಲ್ಲಿ ನಡೆಯುತ್ತದೆ. ಇದು ಯಾವ ಜಾನರ್ ಸಿನಿಮಾ ಅನ್ನೋದು ವರ್ಗೀಕೃತ ಮಾಡುವುದು ಕಷ್ಟ. ಹೀಗಾಗಿ ಇದು ಮಲ್ಟಿಪಲ್ ಜಾನರ್ ನ ಸಿನಿಮಾ ಎಂದು ನಿರ್ದೇಶಕ ಯುವಧೀರ ಮಾಹಿತಿ ಹಂಚಿಕೊಂಡರು.

ಸುಚೇಂದ್ರ ಪ್ರಸಾದ್, ಇವರು ಇಟ್ಟಿರುವ ಶೀರ್ಷಿಕೆ ವ್ಯಾಕರಣ ಬದ್ಧವಲ್ಲ ಹಾಗೇಯೇ ಸಿನಿಮಾ ಕೂಡ ಎಲ್ಲ ವ್ಯಾಕರಣವನ್ನ ಮುರಿಯಲಿದೆ. ಇದು ನಿಜ ಜೀವನದ ಕೆಲವು ಪ್ರಸಂಗ ತಳುಕು ಹಾಕಿ ಕಥೆ ರೆಡಿ ಮಾಡಿದ್ದಾರೆ. ಒಳ್ಳೆ ಕಥಾಹಂದರವನ್ನು ತಯಾರಿಸಿದ್ದಾರೆ ಎಂದು ಹಿರಿಯ ಕಲಾವಿದ ಸುಚೇಂದ್ರ ಪ್ರಸಾದ್ ಹೇಳಿದರು.

ಯುವಧೀರ ನಿರ್ದೇಶನದ ಜೊತೆಗೆ ತಾವೇ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಇವರಿಗೆ ಜೋಡಿಯಾಗಿ ಆದ್ಯಾ ಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸೋನುಗೌಡ, ಪ್ರಮೋದ್ ಶೆಟ್ಟಿ, ಗೋಪಾಲ್ ಕೃಷ್ಣ ದೇಶಪಾಂಡೆ, ಸುಚೇಂದ್ರ ಪ್ರಸಾದ್, ವಿ.ಮನೋಹರ್, ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

ಶ್ರೀನಿಧಿ ಪಿಕ್ಚರ್ ಬ್ಯಾನರ್‌ ತಯಾರಾಗುತ್ತಿರುವ ಗುಡ್ ಗುಡ್ಡರ್ ಗುಡ್ಡೆಸ್ಟ್ ಚಿತ್ರಕ್ಕೆ ಬಿಲ್ಡರ್‌ ಆಗಿರುವ ಸುರೇಶ್‌ ಬಿ ನಿರ್ಮಾಣ ಮಾಡಿದ್ದು, ಇದೊಂದು ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಚಿತ್ರವಾಗಿದ್ದು, ಜೊತೆಗೆ ರೊಮ್ಯಾನ್ಸ್‌, ಥ್ರಿಲ್ಲರ್‌, ಡ್ರಾಮಾ, ಕ್ರೈಂ, ಆ್ಯಕ್ಷನ್‌ ಕೂಡ ಒಳಗೊಂಡಿದೆ. ಬೆಂಗಳೂರು,‌ ಮಂಗಳೂರು, ಮೈಸೂರು ಸುತ್ತಮುತ್ತ 45 ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಸಂದೀಪ್ ಹೊಲ್ಲೂರಿ ಕ್ಯಾಮೆರಾ, ಶಶಾಂಕ್ ಶೇಷಗಿರಿ ಸಂಗೀತ, ಕಿರಣ್ ಸಂಕಲನ ಸಿನಿಮಾಕ್ಕಿದೆ.

Share this post:

Related Posts

To Subscribe to our News Letter.

Translate »