Sandalwood Leading OnlineMedia

ತಾಯಿ ಪ್ರೀತಿ ಸಾರುವ ‘ಹಿರಣ್ಯ’ ಚಿತ್ರದ ಹಾಡಿಗೆ ಪ್ರೇಕ್ಷಕ ಫಿದಾ

ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಟನೆಯ ಹಿರಣ್ಯ ಸಿನಿಮಾ ಟೀಸರ್ ಮೂಲಕ ಭರವಸೆ ಹುಟ್ಟಿಸಿದೆ. ಇದೀಗ ತಾಯಿ ಪ್ರೀತಿ ವಿವರಿಸುವ ಹಿರಣ್ಯನ ಹೃದಯ ಮೀಟುವ ಹಾಡು ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಹಾಡಿಗೆ ಸುಪ್ರಿಯಾ ರಾಮ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಅಭಿನಯಿಸಿರುವ ರಾಜವರ್ಧನ್ ಗೆ ಜೋಡಿಯಾಗಿ ರಿಹಾನಾ ನಟಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಬಿಜಾಪುರದಲ್ಲಿ ಮಳವಳ್ಳಿ ಭರ್ಜರಿ ಶೂಟಿಂಗ್; `ರಾಖಾ’ ಚಿತ್ರದ ಖಾಸ್ ಬಾತ್ ಇದು!

ಹಿರಣ್ಯ ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಜುಲೈ 19ಕ್ಕೆ ಸಿನಿಮಾ ತೆರೆಗೆ ಬರಲಿದೆ.

Share this post:

Related Posts

To Subscribe to our News Letter.

Translate »