ಇತ್ತೀಚೆಗೆ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡುತ್ತಿರುವ ಹೊಂಬಾಳೆ ಫಿಲಂಸ್ ಈಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದೆ.
ಇತ್ತೀಚೆಗಷ್ಟೇ ಕಾಂತಾರ ಚಾಪ್ಟರ್ 1 ಮುಹೂರ್ತ ನಡೆಸಿದ ಹೊಂಬಾಳೆ ಫಿಲಂಸ್ ಇದೀಗ ಸಲಾರ್ ಪಾರ್ಟ್ 1 ಬಿಡುಗಡೆ ತರಾತುರಿಯಲ್ಲಿದೆ. ಅದರ ನಡುವೆ ಮತ್ತೊಂದು ಸಿನಿಮಾ ಬಗ್ಗೆ ಅಪ್ ಡೇಟ್ ಕೊಟ್ಟಿದೆ.
ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕರಾಗಿರುವ ‘ಬಘೀರ’ ಸಿನಿಮಾವನ್ನು ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿದೆ. ಈ ಸಿನಿಮಾದ ಟೀಸರ್ ಡಿಸೆಂಬರ್ 17 ರಂದು ಬೆಳಿಗ್ಗೆ 9.45 ಕ್ಕೆ ಲಾಂಚ್ ಆಗಲಿದೆ. ಈ ದಿನ ಶ್ರೀಮುರಳಿ ಹುಟ್ಟುಹಬ್ಬವಿದ್ದು, ಹುಟ್ಟುಹಬ್ಬಕ್ಕೆ ಈ ಉಡುಗೊರೆ ಸಿಗುತ್ತಿದೆ.
ಬಘೀರ ಸಿನಿಮಾಗೆ ಪ್ರಶಾಂತ್ ನೀಲ್ ಕತೆ ಬರೆದಿದ್ದಾರೆ. ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ರುಕ್ಮಿಣಿ ವಸಂತ್ ಕೂಡಾ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಸರೇ ಹೇಳುವಂತೆ ಇದು ಮತ್ತೊಂದು ಆಕ್ಷನ್ ಥ್ರಿಲ್ಲರ್ ಎಂದು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.