Left Ad
*ಮಯೂರ ಮೋಷನ್ ಪಿಕ್ಚರ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ* . - Chittara news
# Tags

*ಮಯೂರ ಮೋಷನ್ ಪಿಕ್ಚರ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ* .

*ಡಿ.ಜೆ.ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಹೆಸರು “ಹುಲಿ ನಾಯಕ”*
ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು Real star ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.
ಚಿತ್ರದ ಹೆಸರು “ಹುಲಿ ನಾಯಕ” ಎಂದು ಘೋಷಣೆ ಮಾಡಿದ ಉಪೇಂದ್ರ ಅವರು, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
Spread the love
Translate »
Right Ad