ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಿಂದ ಸಿನಿ ಜರ್ನಿ ಆರಂಭಿಸಿದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಈಗ ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.ರಶ್ಮಿಕಾ ಅವರ ಮನಸ್ಸಿಗೆ ಕೆಲ ದಿನಗಳಿಂದ ನೋವಾಗ್ತಿದೆಯಂತೆ. ಅದನ್ನು ಬಹಿರಂವಾಗಿ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
https://www.instagram.com/p/CktPLqGp_1m/
‘ಇತ್ತೀಚಿನ ವರ್ಷಗಳಲ್ಲಿ ನನಗೆ ಕೆಲವು ವಿಚಾರಗಳು ಸಾಕಷ್ಟು ತೊಂದರೆ ನೀಡಿವೆ. ಈ ಬಗ್ಗೆ ನಾನು ಮೊದಲೇ ಮಾತನಾಡಬೇಕಿತ್ತು’ ಎಂದು ರಶ್ಮಿಕಾ ಮಂದಣ್ಣ ಅವರು ಬರಹ ಆರಂಭಿಸಿದ್ದಾರೆ. ‘ವೃತ್ತಿ ಜೀವನ ಆರಂಭ ಆದಾಗಿನಿಂದಲೂ ನನ್ನನ್ನು ದ್ವೇಷಿಸಲಾಗುತ್ತಿದೆ. ಟ್ರೋಲ್ ಮತ್ತು ನೆಗೆಟಿವಿಟಿಗೆ ನಾನು ಪಂಜಿಂಗ್ ಬ್ಯಾಗ್ ರೀತಿ ಆಗಿದ್ದೇನೆ. ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರ ಹಾಗಿದೆ. ಎಲ್ಲರೂ ನನ್ನನ್ನು ಪ್ರೀತಿಸಲೇಬೇಕು ಅಂತೇನಿಲ್ಲ. ನನ್ನ ಬಗ್ಗೆ ನಿಮಗೆ ಸಹಮತ ಇಲ್ಲ ಎಂದಮಾತ್ರಕ್ಕೆ ನೀವು ನೆಗೆಟಿವಿಟಿ ಹಬ್ಬಿಸಬಹುದು ಅಂತ ಅರ್ಥವಲ್ಲ’ ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.
‘ನಿಮ್ಮೆಲ್ಲರನ್ನು ರಂಜಿಸಲು ನಾನು ಸತತ ಶ್ರಮಪಡುತ್ತಿದ್ದೇನೆ. ಆ ಕೆಲಸದ ಬಗ್ಗೆ ನಾನು ಹೆಚ್ಚು ಯೋಚಿಸುತ್ತೇನೆ. ನಾನು ಮತ್ತು ನೀವು ಇಬ್ಬರೂ ಹೆಮ್ಮೆ ಪಡುವಂತಹ ಕೆಲಸ ಮಾಡಲು ನಾನು ಪ್ರಯತ್ನಿಸುತ್ತಿದ್ದೇನೆ. . ನಾನು ಮಾಡಿದ ಕೆಲಸದಿಂದ ನೀವು ಅನುಭವಿಸುವ ಖುಷಿ ಬಗ್ಗೆ ನಾನು ಹೆಚ್ಚು ಕಾಳಜಿ ವಹಿಸುತ್ತೇನೆ. ನೀವು ಮತ್ತು ನಾನು ಇಬ್ಬರೂ ಹೆಮ್ಮೆ ಪಡುವ ಕಂಟೆಂಟ್ ನೀಡಲು ನಾನು ನಿಜವಾಗಿಯೂ ಪ್ರಯತ್ನಿಸುತ್ತಿದ್ದೇನೆ.
ನಾನು ಹೇಳಿಲ್ಲದೇ ಇರುವ ವಿಚಾರಕ್ಕೆ ನನ್ನನ್ನು ಟ್ರೋಲ್ ಮಾಡುತ್ತಿರುವುದು ನಿಜಕ್ಕೂ ನೋವಿನ ಸಂಗತಿ’ ಎಂದು ರಶ್ಮಿಕಾ ಅವರು ತಮ್ಮ ಬೇಸರ ತೋಡಿಕೊಂಡಿದ್ದಾರೆ.‘ಸಂದರ್ಶನಗಳಲ್ಲಿ ನಾನು ಹೇಳಿದ್ದನ್ನು ನನ್ನ ವಿರುದ್ಧವೇ ತಿರುಗಿಸಲಾಗಿದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವಂತಹ ತಪ್ಪು ಕಥೆಗಳನ್ನು ಇಂಟರ್ನೆಟ್ನಲ್ಲಿ ಹರಡಿಸಲಾಗಿದೆ. ಒಳ್ಳೆಯ ಟೀಕೆಯನ್ನು ನಾನು ಸ್ವಾಗತಿಸುತ್ತೇನೆ. ಅದರಿಂದ ಬೆಳವಣಿಗೆ ಸಾಧ್ಯ. ಆದರೆ ನೆಗೆಟಿವಿಟಿ ಮತ್ತು ದ್ವೇಷದಿಂದ ಏನು ಸಾಧ್ಯ’ ಎಂದು ಎಂದು ರಶ್ಮಿಕಾ ಬರೆದಿದ್ದಾರೆ.