ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಈ ಹಾಡಿದ್ದಾರೆ. ವಿಜೇತ್ ಮಂಜಯ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.
ಇತ್ತೀಚೆಗೆ ಈ ಹಾಡನ್ನು ಉಪೇಂದ್ರ ಅವರೆ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
“ಯೋಗರಾಜ್ ಭಟ್ ಹಾಡನ್ನು ತುಂಬಾ ಚೆನ್ನಾಗಿ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನಿರ್ದೇಶಕರು ಟ್ಯೂನ್ ಮಾಡಿದ್ದಾರೆ. ಎಲೆಕ್ಷನ್ ಕುರಿತಾದ ಈ ಹಾಡು ಸೊಗಸಾಗಿದೆ. ನೀವು ನಿಮ್ಮ ಮತವನ್ನು ದೇಶ, ರಾಜ್ಯಕ್ಕಾಗಿ ಎನ್ನುವುದಕ್ಕಿಂತ, ನನ್ನ ಮನೆ, ನನ್ನ ಮಕ್ಕಳು ಹಾಗೂ ನನ್ನ ಜೀವನಕ್ಕೆ ಬಹಳ ಮುಖ್ಯ ಎಂದು ಎಲ್ಲರೂ ಮತದಾನ ಮಾಡಿ ಎಂದು ಉಪೇಂದ್ರ ಹೇಳಿದ್ದಾರೆ.
ನಿರ್ಮಾಪಕ ವರದರಾಜು, ನಿರ್ದೇಶಕ ವಿಜಯ್ ಭಾರ್ಗವ್ ಹಾಗೂ ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಡು ಬಿಡುಗಡೆ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡೈನಾಮಿಕ್ ಸ್ಟಾರ್ ದೇವರಾಜ್, ನಾಗಾಭರಣ, ಅಚ್ಯತಕುಮಾರ್, ಸುಧಾರಾಣಿ, ಶೋಭ್ ರಾಜ್, ವಿಜಯ್ ಭಾರ್ಗವ, ದಿವ್ಯ ಗೌಡ, ತಬಲನಾಣಿ, ಸುಧಾ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.