ರಣಬೀರ್ ಕಪೂರ್ ನಾಯಕರಾಗಿ ಬಾಲಿವುಡ್ ನಲ್ಲಿ ನಿರ್ಮಾಣವಾಗಲಿರುವ ರಾಮಾಯಣ ಸಿನಿಮಾಗೆ ಜಾಹ್ನವಿ ಕಪೂರ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.ಈ ಮೊದಲು ರಣಬೀರ್ ಕಪೂರ್ ಗೆ ನಾಯಕಿಯಾಗಿ ಸೀತೆ ಪಾತ್ರವನ್ನು ಸೌತ್ ಸುಂದರಿ ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಈಗ ಸಾಯಿ ಪಲ್ಲವಿ ಸ್ಥಾನಕ್ಕೆ ಬಾಲಿವುಡ್ ತಾರೆ, ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಇದು ಇನ್ನೂ ಅಧಿಕೃತವಾಗಿಲ್ಲ.
ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ರಾಮಾಯಣ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಆದರೆ ನಾಯಕಿ ಪಾತ್ರಕ್ಕೆ ಸಾಯಿ ಪಲ್ಲವಿ ಜಾಗಕ್ಕೆ ಜಾಹ್ನವಿ ಬರುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ರಾಮನ ಪಾತ್ರ ಮಾತ್ರ ಅಂತಿಮವಾಗಿದೆ. ಆದರೆ ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯುತ್ತಿದೆ.
ಜಾಹ್ನವಿ ಕಪೂರ್ ಈಗಾಗಲೇ ನಿತೀಶ್ ತಿವಾರಿ ಜೊತೆ ಒಂದು ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನೇ ಆಯ್ಕೆ ಮಾಡುವ ಸಾಧ‍್ಯತೆಯಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಚಿತ್ರತಂಡದಿಂದ ಇನ್ನೂ ಅಧಿಕೃತ ಸುದ್ದಿ ಬಂದಿಲ್ಲ.