Sandalwood Leading OnlineMedia

`ಜೋಗ’ದ `ಸಿನಿ’ ಬೆಳಕಿನಲ್ಲಿ ಚಿನ್ನಾರಿ ಮುತ್ತ!

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ:   ಸದ್ದು ಮಾಡುತ್ತಿದೆ ಶಿವಣ್ಣ, ದರ್ಶನ್ ಮೆಚ್ಚಿದ ‘ಫ್ರೀಡಮ್’ ಅಲ್ಬಮ್ ಸಾಂಗ್

ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ “ಜೋಗ್ 101” ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ. ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

 

ಇದನ್ನೂ ಓದಿಟೈಟಲ್ ಪೋಸ್ಟರ್‌ನಿಂದಲೇ ಗಮನಸೆಳೆದ ರಂಗಾಯಣ ರಘು ನಟನೆಯ ‘ಶಾಖಾಹಾರಿ’ ಸಿನಿಮಾ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ,  ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ.

 

Share this post:

Related Posts

To Subscribe to our News Letter.

Translate »