ಟ್ರೇಲರ್ ಮೂಲಕ ಪ್ರೇಕ್ಷಕರನ್ನು ಕುತೂಹಲದ ಪರದಿಗೆ ಕರೆದೊಯ್ಯುದಿರುವ ಜುಗಲ್ ಬಂದಿ ಸಿನಿಮಾ ಮಾರ್ಚ್ 1 ರಂದು ತೆರೆಕಾಣಲಿದೆ. ದಿವಾಕರ್ ಡಿಂಡಿಮ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವನ್ನು ಭವಿಷ್ಯದ ನಿರ್ದೇಶಕರಿಗೆ ತೋರಿಸುವ ಹೊಸ ಪ್ರಯತ್ನಕ್ಕೆ ಚಿತ್ರತಂಡ ಮುಂದಾಗಿದೆ.
ಅಸಿಸ್ಟೆಂಟ್ ಡೈರೆಕ್ಟರ್ಸ್ ಗಳಿಂದ ಜುಗಲ್ ಬಂದಿ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿತ್ತು. ಇದೀಗ ಅವರುಗಳಿಗೆ ಮೊದಲು ಚಿತ್ರವನ್ನು ತೋರಿಸಲು ನಿರ್ದೇಶಕ ಹಾಗೂ ನಿರ್ಮಾಪಕರು ಆಗಿರುವ ದಿವಾಕರ್ ಡಿಂಡಿಮ ಸಜ್ಜಾಗಿದ್ದಾರೆ. ಇದೇ 29ನೇ ತಾರೀಖುನಂದು ಅಸಿಸ್ಟೆಂಟ್ ಡೈರೆಕ್ಟರ್ಸ್ ಗಳಿಗೆ ಸ್ಪೆಷಲ್ ಶೋ ಏರ್ಪಡಿಸಲಾಗಿದೆ. ಈ ಮೂಲಕ ಸಿನಿಮಾ ಹಸಿವಿದ್ದ ಕಣ್ಣುಗಳಿಗೆ ಮೊದಲು ಈ ಚಿತ್ರ ತಲುಪಬೇಕು ಎನ್ನುವುದು ನಿರ್ದೇಶಕ ದಿವಾಕರ್ ಅವರ ಗುರಿ..ಈ ರೀತಿ ಪ್ರಯತ್ನ ಇದೇ ಮೊದಲ ಬಾರಿಗೆ ಚಿತ್ರರಂಗದಲ್ಲಿ ನಡೆಯುತ್ತಿರುವುದು ವಿಶೇಷ.
ಭಗವದ್ಗೀತೆ, ಕುರಾನ್, ಬೈಬಲ್ನಲ್ಲೂ ಬರ್ದಿಲ್ಲ ದುಡ್ಮಾಡದೆಂಗತ!’ ಎಂಬ ಅಡಿಬರಹದ ಮೂಲಕ ನಿರೀಕ್ಷೆ ಇಮ್ಮಡಿಗೊಳಿಸಿರುವ ಜುಗಲ್ ಬಂದಿ ಸಿನಿಮಾಗೆ ದಿವಾಕರ್ ಡಿಂಡಿಮ್ ಆಕ್ಷನ್ ಕಟ್ ಹೇಳಿದ್ದಾರೆ. ಕಾಂತಾರ ಖ್ಯಾತಿಯ ಮಾನಸಿ ಸುಧೀರ್, ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್ ಪಲ್ಲಕ್ಕಿ, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳು. ಹಾಗೇ ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್, ಅರವಿಂದ್ ರಾವ್ ‘ಜುಗಲ್ ಬಂದಿ’ ಸಿನಿಮಾದಲ್ಲಿ ನಟಿಸಿದ್ದಾರೆ.
ದಿವಾಕರ ಡಿಂಡಿಮ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಇವರದ್ದೇ. ಪ್ರದ್ಯೋತ್ತನ್ ಸಂಗೀತ ನೀಡಿದ್ರೆ, ಪ್ರಸಾದ್ ಹೆಚ್ ಎಂ ಸಂಕಲನ ಚಿತ್ರಕ್ಕಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರೂ ಹಾಡುಗಳಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಅವರೇ ಸಾಹಿತ್ಯ ರಚಿಸಿದ್ದಾರೆ. ಸಹ ನಿರ್ದೇಶನ ಬಾಲಕೃಷ್ಣ ಯಾದವ್, ಶ್ರೀನಿವಾಸ್ ಸಿನಿ. ಸಹಾಯಕ ನಿರ್ದೇಶಕರು ಸಂತೋಷ್ ಆಶ್ರಯ, ಕೊಟ್ರೇಶಿ ಕನಸು. ನಿರ್ದೇಶನ ಟ್ರೈನಿಯಾಗಿ ರಘು ವೈ.ಜಿ. ಕಲೆ – ತಿರುಪತಿ, ಲೈಟಿಂಗ್ ಮಂಜೇಶ, ಯೂನಿಟ್ ಉಲ್ಲಾಸ ಅವರ ಕೆಲಸ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ವಿಷಿಕಾ ಫಿಲ್ಮ್ಸ್ ರಾಜ್ಯಾದ್ಯಂತ ಸಿನಿಮಾ ವಿತರಣೆ ಜವಾಬ್ದಾರಿ ಹೊತ್ತಿದ್ದು, ಅವರದ್ದೇ ಪ್ರೆಸೆಂಟ್ಸ್ ಮೂಲಕ ಜುಗಲ್ ಬಂದಿ ಸಿನಿಮಾ ತೆರೆಗೆ ಬರಲಿದೆ.