ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪ್ರೇಮ್ ನಿರ್ದೇಶನದ ‘ಕೆಡಿ’ ಹಾಗೂ ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರಗಳ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ.
ಇನ್ನೂ ಓದಿ “13” ಐಟಂ ಸಾಂಗ್ ಬಿಡುಗಡೆ
ಮಾರ್ಟಿನ್’ ಚಿತ್ರದ ಮಾತಿನ ಭಾಗದ ಶೂಟಿಂಗ್ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹಾಡುಗಳ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಧ್ರುವ ಸರ್ಜಾ ಅವರು, ಆಗಸ್ಟ್ ಮೊದಲ ವಾರ “ಮಾರ್ಟಿನ್’ ಚಿತ್ರದ ಹಾಡುಗಳ ಚಿತ್ರೀಕರಣ ಪ್ರಾರಂಭವಾಗಲಿದೆ. ಅಷ್ಟರಲ್ಲಿ “ಕೆಡಿ’ ಚಿತ್ರದ ಮೈಸೂರು ಶೆಡ್ಯುಲ್ ಶೂಟಿಂಗ್ ಪೂರ್ಣಗೊಳಿಸಲಿಲಾಗುತ್ತದೆ ಎಂದು ಹೇಳಿದ್ದಾರೆ. ಮಾರ್ಟಿನ್ ಚಿತ್ರದ ಕಥೆಯನ್ನು ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ಬರೆದಿದ್ದು, ಚಿತ್ರದ ಟೀಸರ್ ಫೆಬ್ರವರಿ 23 ರಂದು ಬಿಡುಗಡೆಯಾಗಿತ್ತು.
ಇನ್ನೂ ಓದಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ.
ಟೀಸರ್ ನೋಡಿದ್ದ ಲಕ್ಷಾಂತರ ಅಭಿಮಾನಿಗಳು, ರೋಮಾಂಚನಗೊಂಡಿದ್ದರು. ಈ ನಡುವೆ ಚಿತ್ರ ತಂಡ ಪೋಸ್ಟ್-ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದು, ಚಿತ್ರವು ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಡಬ್ ಆಗಲಿದೆ ಎಂದು ತಿಳಿದುಬಂದಿದೆ. ಧ್ರುವ ಸರ್ಜಾ ಜೊತೆಗೆ, ಚಿತ್ರದಲ್ಲಿ ವೈಭವಿ ಶಾಂಡಿಲ್ಯ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ, ಅನ್ವೇಶಿ ಜೈನ್ ಮತ್ತು ಸುಕೃತಾ ವಾಗ್ಲೆ ಅವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಉದಯ್ ಕೆ ಮೆಹ್ತಾ ಅವರು ವಾಸವಿ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ, ಚಿತ್ರಕ್ಕೆ ಮಣಿ ಶರ್ಮಾ ಸಂಗೀತ ಸಂಯೋಜಿಸಿದ್ದರೆ, ರವಿ ಬಸ್ರೂರ್ ಹಿನ್ನೆಲೆ ಸಂಗೀತವನ್ನು ನೀಡಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ ನೀಡುತ್ತಿದ್ದು, ಹೆಸರಾಂತ ಸ್ಟಂಟ್ ಕೊರಿಯೋಗ್ರಾಫರ್ಗಳಾದ ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರ ಅದ್ದೂರಿ ಯಾಗಿ ಮೂಡಿದೆ. ತೆರೆಯಮೇಲೆ ರಂಜಿಸೋಕೆ ಬರಬೇಕಿದೆ.