Sandalwood Leading OnlineMedia

ಶಿಡ್ಲಘಟ್ಟದಲ್ಲಿ ಫೆಬ್ರವರಿ 26 ರಂದು `ಕಬ್ಜ’ ಮೇನಿಯಾ!

ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಬಹು ನಿರೀಕ್ಷಿತ ಪ್ಯಾನ್ ಇಂಡಯಾ ಸಿನಿಮಾ “ಕಬ್ಬ”. ಆರ್ ಚಂದ್ರು ನಿರ್ದೇಶಿಸಿರುವ “ಕಬ್ಜ” ಚಿತ್ರದ ಕಮರ್ಷಿಯಲ್ ಸಾಂಗ್ ಹಾಗೂ ಜೂಟ್ ಬಾಕ್ಸ್ ಇದೇ ಫೆಬ್ರವರಿ 26 ರಂದು  ಶಿಡ್ಲಘಟ್ಟದಲ್ಲಿ ಬಿಡುಗಡೆಯಾಗಲಿದೆ. ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ಶಿಡ್ಲಘಟ್ಟ ಆರ್ ಚಂದ್ರು ಅವರ ತವರೂರು. ತಮ್ಮೂರಿನಲ್ಲಿ “ಕಬ್ಜ” ಚಿತ್ರದ ಅದ್ದೂರಿ ಸಮಾರಂಭ ಆಯೋಜಿಸಿರುವ ಆರ್ ಚಂದ್ರು, ಸಮಾರಂಭ ಯಶಸ್ವಿಯಾಗಿ ನಡೆಯಲು ಈಗಾಗಲೇ ತಯಾರಿ ಆರಂಭಿಸಿದ್ದಾರೆ.  ಅದ್ದೂರಿ ಸಮಾರಂಭದಲ್ಲಿ ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ಸಾಧ್ಯತೆಯಿದೆ

 ಅಪ್ಪು ಹುಟ್ಟುಹಬ್ಬದಂದು ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ರಿಲೀಸ್

 ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ದುನಿಯಾ ವಿಜಯ್, ಪ್ರೇಮ್, ಶ್ರೇಯಾ ಶರಣ್ ಹಾಗೂ ಆಂದ್ರ, ತಮಿಳುನಾಡು, ಕೇರಳದಿಂದ ಸಹ ಪ್ರಮುಖ ಗಣ್ಯರು ಈ ವರ್ಣರಂಜಿತ ಸಮಾರಂಭಕ್ಕೆ ಆಗಮಿಸುತ್ತಿದ್ದಾರೆ. ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ  ಬಹು ನಿರೀಕ್ಷಿತ “ಕಬ್ಜ” ಚಿತ್ರ ಮಾರ್ಚ್ 17 ರಂದು ತೆರೆಗೆ ಬರಲಿದೆ.

 

Share this post:

Related Posts

To Subscribe to our News Letter.

Translate »