Left Ad
ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ರಾಜೇಂದ್ರ ಸಿಂಗ್ ಬಾಬುಗೆ ಗೌರವ - Chittara news
# Tags

ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ರಾಜೇಂದ್ರ ಸಿಂಗ್ ಬಾಬುಗೆ ಗೌರವ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ನೇತೃತ್ವದಲ್ಲಿ ‘SVR @ 50’ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಚಾಮರಾಜಪೇಟೆಯ ಕಲಾವಿದರ ಭವನದಲ್ಲಿ ಅಕ್ಟೋಬರ್ 23 ರಿಂದ 27ರ ವರೆಗೆ ನಡೆದ ಈ 5 ದಿನಗಳ ಸಾಧನೆ, ಸಂಭ್ರಮ, ಚಿತ್ರೋತ್ಸವ ಕಾರ್ಯಕ್ರಮದಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ವಿವಿಧ ಸಿನಿಮಾಗಳ ಪ್ರದರ್ಶನ ಹಾಗೂ ಸಂವಾದ ಸಂಕೀರ್ಣಗಳು ನಡೆದವು.

ಇಂದು (ಅ.27) ನಡೆದ ಸಮಾರೋಪ ಸಮಾರಂಭದಲ್ಲಿ ಸ್ಯಾಂಡಲ್‌ವುಡ್‌ನ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತುಂಬಿದರು. ನಾದಬ್ರಹ್ಮ ಹಂಸಲೇಖ, ನಟಿ ಸುಹಾಸಿನಿ, ನಿರ್ದೇಶಕ ನಾಗತ್ತಿಹಳ್ಳಿ ಚಂದ್ರಶೇಖರ್, ನಟ ಡಾ. ವಿ. ರವಿಚಂದ್ರನ್, ನಿರ್ದೇಶಕ ಟಿ.ಎನ್. ಸೀತಾರಾಮ್, ನಟರು ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಸೇರಿದಂತೆ ಅನೇಕ ಸಿನಿ ಗಣ್ಯರು ಹಾಜರಿದ್ದರು.

ರಾಜೇಂದ್ರ ಸಿಂಗ್ ಬಾಬು ಅವರ ದೀರ್ಘಕಾಲದ ಚಿತ್ರಯಾತ್ರೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಗಣ್ಯರು ಅವರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಅವರ ಆಪ್ತರು, ಕುಟುಂಬಸ್ಥರು ಹಾಗೂ ಅಭಿಮಾನಿಗಳೂ ಭಾಗಿಯಾಗಿ ಸಂಭ್ರಮ ಹಂಚಿಕೊಂಡರು.

Spread the love
Translate »
Right Ad