Sandalwood Leading OnlineMedia

ಫೆಬ್ರವರಿ 23 ರಂದು ತೆರೆಗೆ ಬರಲಿದೆ “ಕಪ್ಪು ಬಿಳುಪಿನ ನಡುವೆ ” ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ ಖ್ಯಾತ ನಟ ವಿಜಯ್ ಸೇತುಪತಿ .

ವೃತ್ತಿಯಲ್ಲಿ ಪಾರಂಪರಿಕ ಆಯುರ್ವೇದ ವೈದ್ಯರಾಗಿರುವ ಧರ್ಮೇಂದ್ರ ಅವರು ನಿರ್ಮಿಸಿರುವ, ವಿಭಿನ್ನ ಕಥೆಯ ಹಾರಾರ್ ಚಿತ್ರ “ಕಪ್ಪು ಬಿಳುಪಿನ ನಡುವೆ” ಚಿತ್ರ ಇದೇ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಸಂತ್ ವಿಷ್ಣು ಈ ಚಿತ್ರವನ್ನು ನಿರ್ದೇಶಿಸುವುದರೊಂದಿಗೆ, ನಾಯಕನಾಗೂ ಅಭಿನಯಿಸಿರುವ ಈ ಚಿತ್ರದ ಟ್ರೇಲರ್ ವೀಕ್ಷಿಸಿದ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಕನ್ನಡ ಹಾಗೂ ತಮಿಳಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದೆ.

“ಕಪ್ಪು ಬಿಳುಪಿನ ನಡುವೆ” ಹಾರಾರ್ ಚಿತ್ರವಾಗಿದ್ದು, “ಕಪ್ಪು ಬಿಳುಪನ್ನು” ಕತ್ತಲು, ಬೆಳುಕಿಗೆ ಹೋಲಿಸಬಹುದು. ಪಾಸಿಟಿವ್ ಹಾಗೂ ನೆಗಟಿವ್ ಎನರ್ಜಿ ಅಂತಲೂ ಎನ್ನಬಹುದು.ಯೂಟ್ಯೂಬರ್ ಗಳ ಸುತ್ತ ಈ ಚಿತ್ರದ ಕಥೆ ಸುತ್ತುತ್ತದೆ ಎಂದು ವಸಂತ್ ವಿಷ್ಣು ತಿಳಿಸಿದ್ದಾರೆ.


.
ವಸಂತ್ ವಿಷ್ಣು ಅವರಿಗೆ ನಾಯಕಿಯಾಗಿ ವಿದ್ಯಾಶ್ರೀ ಗೌಡ ನಟಿಸಿದ್ದಾರೆ. ಬಿರಾದಾರ್, ಶರತ್ ಲೋಹಿತಾಶ್ವ, ಹಾಸ್ಯ ನಟ ಹರೀಶ್, ನವೀನ್ ರಘು, ಮಾಹೀನ್ ಭಾರದ್ವಾಜ್, ತೇಜಸ್ವಿನಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಚಿತ್ರದಲ್ಲಿ ಮೂರು ಹಾಡುಗಳಿದ್ದು ಡಾ||ವಿ.ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ರಿಶಾಲ್ ಸಾಯಿ ಸಂಗೀತ ನೀಡಿದ್ದಾರೆ. ಕೆ.ಜಿ.ಎಫ್ ಖ್ಯಾತಿಯ ಸಂತೋಷ್ ವೆಂಕಿ, ಶ್ರೀಧರ್ ಕಶ್ಯಪ್ ಹಾಡುಗಳನ್ನು ಹಾಡಿದ್ದಾರೆ. ಪ್ರವೀಣ್ ಶೆಟ್ಟಿ ಛಾಯಾಗ್ರಹಣ ಹಾಗೂ ಅಮಿತ್ ಜಾವಲ್ಕರ್ ಸಂಕಲನ ಈ ಚಿತ್ರಕ್ಕಿದೆ.

Share this post:

Related Posts

To Subscribe to our News Letter.

Translate »