ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಸೆಟ್ಟೇರಿತು ಕೆ ಆರ್ ಎಸ್ ಪ್ರೊಡಕ್ಷನ್ಸ್ ಚೊಚ್ಚಲ ಸಿನಿಮಾ- ಅಥರ್ವ ಆರ್ಯ ನಿರ್ದೇಶನದ ಸಿನಿಮಾ
ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಅರುಣ್ ಸಾಗರ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ ಈ ಚಿತ್ರದ ಕುರಿತು ಯಾವುದೇ ವಿಷಯ ಹೊರಬಂದಿರಲಿಲ್ಲ. ಅಂತಹ ವಿಷಯ ಚಿತ್ರದಲ್ಲಿ ಏನಿರಬಹುದು?
ಎಂಬ ಕೌತುಕ ಎಲ್ಲರಲ್ಲೂ ಇದೆ.
ರಾಕಿ ಸೋಮ್ಲಿ ನಿರ್ದೇಶನದ ‘ಕೆಂಡದ ಸೆರಗು’ ಟೀಸರ್ ರಿಲೀಸ್
ಬೆಂಗಳೂರಿನಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರವೆಂಬ ಮಾಹಿತಿ ಇದೆ. ಚಿತ್ರೀಕರಣದ ವೇಳೆ ನಾಯಕಿ ಸಂಯುಕ್ತ ಹೆಗಡೆ ಅವರಿಗೆ ಭಾರಿ ಪೆಟ್ಟು ಬಿದ್ದ ವಿಷಯ ಮಾತ್ರ ತಿಳಿದಿತ್ತು. ಸಂಯುಕ್ತ ಅವರು ಚೇತರಿಸಿಕೊಂಡ ನಂತರ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈಗ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಲಿದೆ.
ಸುನೋಜ್ ವೇಲಾಯುಧನ್ ಛಾಯಾಗ್ರಹಣ, ಶಿವು (ಕೆಜಿಎಫ್) ಕಲಾ ನಿರ್ದೇಶನ, ಆರ್ಯನ್ ಸಂಕಲನ ಹಾಗೂ ಪ್ರಭು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.