Sandalwood Leading OnlineMedia

ಕಿಚ್ಚನ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್!

ಕಿಚ್ಚನ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್!

ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ನೆನ್ನೆ ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದ ವಿಕ್ರಾಂತ್ ರೋಣ ಸಿನಿಮಾ ನೋಡಲು ಪ್ರೇಕ್ಷಕ   ನೆನ್ನೆ ಮುಂಜಾನೆಯಿಂದಲೇ ಚಿತ್ರಮಂದಿರಗಳಲ್ಲಿ ಜಮಾಯಿಸಿದ್ದರು. ಸಿನಿಮಾದಲ್ಲಿ ಕಿಚ್ಚನ ಸ್ಟೈಲಿಶ್ ಲುಕ್‌ ನೋಡಿ ಫಿದಾ ಆಗಿರುವ ಅಭಿಮಾನಿಗಳು ಸದ್ಯ ಸಿನಿಮಾ ನೋಡುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್​ ಅಭಿನಯದ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಮೊದಲ ದಿನ ಉತ್ತಮ ಕಲೆಕ್ಷನ್​ ಆಗಿದೆ. ಶುಕ್ರವಾರ ಮತ್ತು ವೀಕೆಂಡ್​ ದಿನಗಳಲ್ಲಿ ಇನ್ನೂ ಹೆಚ್ಚಿನ ಬಿಸ್ನೆಸ್​ ಆಗುವ ನಿರೀಕ್ಷೆ ಇದೆ.ಮೊದಲ ದಿನವೇ ಕಿಚ್ಚ ಸುದೀಪ್ ಅಭಿಮಾನಿಗಳು ಮುಗಿಬಿದ್ದು ನೋಡಿದ್ದಾರೆ. ಅಪಾರ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಮೊದಲ ದಿನ ‘ವಿಕ್ರಾಂತ್​ ರೋಣ’ ಬಾಕ್ಸ್​ ಆಫೀಸ್​ ಕಲೆಕ್ಷನ್ ಎಷ್ಟು ಆಗಿರಬಹುದು? ಈ ಕುತೂಹಲದ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಒಂದು ಅಂದಾಜಿನ ಪ್ರಕಾರ ಈ ಸಿನಿಮಾ ಬರೋಬ್ಬರಿ 20ರಿಂದ 22 ಕೋಟಿ ರೂಪಾಯಿ ಕಮಾಯಿ ಮಾಡಿರುವ ಸಾಧ್ಯತೆ ಇದೆ. ಈ ಕುರಿತು ಚಿತ್ರದ ನಿರ್ಮಾಪಕರ ಕಡೆಯಿಂದ ಇನ್ನಷ್ಟೇ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ.

 

https://twitter.com/BlogDrive/status/1552686385437769728?ref_src=twsrc%5Etfw%7Ctwcamp%5Etweetembed%7Ctwterm%5E1552686385437769728%7Ctwgr%5E%7Ctwcon%5Es1_&ref_url=https%3A%2F%2Fkannada.news18.com%2Fnews%2Fentertainment%2Fkiccha-sudeep-movie-vikrant-rona-first-day-box-office-collection-report-forecast-skb-809368.html

KGF 2 ದಾಖಲೆ ಮುರಿದ ವಿಕ್ರಾಂತ್ ರೋಣ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ಚಿತ್ರವು ಸರಿಸುಮಾರು 2500 ಸ್ಕ್ರೀನ್‌ಗಳಲ್ಲಿ 9500ಕ್ಕೂ ಅಧಿಕ ಶೋಗಳು ಕನ್ಫರ್ಮ್ ಆಗಿದೆ ಎಂದು ತಿಳಿದುಬಂದಿದೆ. ಜೊತೆಗೆ 3Dಯಲ್ಲೂ ಪ್ರಪಂಚದಾದ್ಯಂತ 1600ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ತೆರೆಕಂಡಿದೆ. ಇದರ ನಡುವೆ ಭಾರತದಲ್ಲಿ ಕನ್ನಡ ಮಲ್ಟಿಫ್ಲೆಕ್ಸ್ ಶೋಗಳ ಸಂಖ್ಯೆಯಲ್ಲಿ ವಿಕ್ರಾಂತ್ ರೋಣ ಸಿನಿಮಾವು ಕೆಜಿಎಫ್-2 ದಾಖಲೆಯನ್ನು ಮುರಿದಿದೆ. ಹೌದು, ವಿಕ್ರಾಂತ್ ರೋಣ ಚಿತ್ರವು ದೇಶಾದ್ಯಂತ 1047 ಕನ್ನಡ ಶೋಗಳು ದೊರಕಿವೆ. KGF 2 ಚಿತ್ರಕ್ಕೆ 913 ಶೋಗಳು ಸಿಕ್ಕಿದ್ದವು.ಈ ಅಂಕಿ ಅಂಶದಲ್ಲಿ ವಿಕ್ರಾಂತ್ ರೋಣ (1600), ಕೆಜಿಎಫ್ 2 (913) ಸ್ಕ್ರೀನ್​ಗಳಲ್ಲಿ ಬಿಡುಗಡೆ ಆಗಿ ಮೊದಲ 2 ಸ್ಥಾನಗಳಲ್ಲಿವೆ. ಉಳಿದಂತೆ, ಜೇಮ್ಸ್ (845),  ಯುವರತ್ನ (718) ಮತ್ತು  ಪೊಗರು (651) ಸ್ಕ್ರೀನ್​ಗಳಲ್ಲಿ ರಿಲೀಸ್​ ಆಗಿ ಕ್ರಮವಾಗಿ ಟಾಪ್ 5 ಸ್ಥಾನದಲ್ಲಿವೆ.

ಪ್ರಿಯಾ ಸುದೀಪ್ ಅವರು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದು, ಅವರ ಜೊತೆ ಊರ್ವಶಿ ಥಿಯೇಟರ್‌ನಲ್ಲಿ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಚಿತ್ರತಂಡ ಸಿನಿಮಾ ವೀಕ್ಷಿಸಿದ್ದಾರೆ. ವೀರೇಶ್ ಥಿಯೇಟರ್‌ನಲ್ಲಿ ಕಿಚ್ಚನ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಕನ್ನಡ, ಇಂಗ್ಲೀಷ್ ಸೇರಿದಂತೆ 6 ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಆಂಧ್ರ-ತೆಲಂಗಾಣ, ತಮಿಳುನಾಡು, ಕೇರಳ, ಉತ್ತರ ಭಾರತ ಸೇರಿದಂತೆ 50ಕ್ಕೂ ಹೆಚ್ಚು ದೇಶಗಳಲ್ಲಿ ವಿಕ್ರಾಂತ್ ರೋಣ ಅಬ್ಬರಿಸುತ್ತಿದ್ದಾನೆ.

ನಿರ್ದೇಶಕ ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳಿರುವ ವಿಕ್ರಾಂತ್ ರೋಣ ಚಿತ್ರದಲ್ಲಿ ನಾಯಕ ನಟರಾಗಿ ಕಿಚ್ಚ ಸುದೀಪ್ ಅಭಿನಯಿಸಿದರೆ, ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕೆಲ್ವಿನ್ ಫರ್ನಾಂಡಿಸ್, ರವಿಶಂಕರ್ ಗೌಡ ಸೇರೆದಂತೆ ಹಲವಾರು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣ ಚಿತ್ರಕ್ಕಿದೆ.

Share this post:

Translate »