ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಗೆಲುವಿನ ನಗೆ ಬೀರಿದೆ. ಅನೂಪ್ ಭಂಡಾರಿ ಸಾರಥ್ಯದಲ್ಲಿ ಬಂದ ವಿಕ್ರಾಂತ್ ರೋಣ ಸಿನಿಮಾ ಕನ್ನಡ ಸೇರಿದಂತೆ ಸೌತ್ ಇಂಡಿಯಾದ ಎಲ್ಲಾ ಭಾಷೆಗಳು ಹಾಗೂ ಹಿಂದಿಯಲ್ಲೂ ರಿಲೀಸ್ ಆಗಿತ್ತು. ಪ್ಯಾನ್ ಮಟ್ಟದಲ್ಲಿ ಅದ್ದೂರಿಯಾಗಿ ತೆರೆಗೆ ಬಂದ ವಿಕ್ರಾಂತ್ ರೋಣ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರ ವೃತ್ತಿಜೀವನದಲ್ಲಿ ಬಿಗ್ಗೆಸ್ಟ್ ಓಪನಿಂಗ್ ಪಡೆದ ಸಿನಿಮಾ ಎಂಬ ಖ್ಯಾತಿಗೆ ವಿಕ್ರಾಂತ್ ರೋಣ ಪಾತ್ರವಾಗಿದೆ.
ವಿಕ್ರಾಂತ್ ರೋಣ ಬಳಿಕ ಸುದೀಪ್ ಬಿಗ್ ಬಾಸ್ ಒಟಿಟಿಯಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿಗೆ ಬಿಗ್ ಬಾಸ್ ಒಟಿಟಿ ಆರಂಭವಾಗಿದ್ದು ಸುದೀಪ್ ಅವರೇ ಹೋಸ್ಟ್ ಮಾಡುತ್ತಿದ್ದಾರೆ. ಆದರೆ ಸುದೀಪ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ವಿಕ್ರಾಂತ್ ರೋಣ ನಂತರ ಸುದೀಪ್ ಮುಂದಿನ ಸಿನಿಮಾ ಯಾವುದು ಎಂದು ರಿವೀಲ್ ಮಾಡಿಲ್ಲ. ಆದರೀಗ ಕಿಚ್ಚ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ಸುದೀಪ್ ನ್ಯೂ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಂಪೂರ್ಣವಾಗಿ ದಾಡಿ ಮತ್ತು ಮೀಸೆ ತೆಗೆದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಕಿಚ್ಚ ಸುದೀಪ್ ಅವರ ಈ ಹೊಸ ಲುಕ್ ಯಾವ ಸಿನಿಮಾಗೆ ಎನ್ನುವ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಅಭಿಮಾನಿ ಜೊತೆ ಸುದೀಪ್ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋ ಎಲ್ಲಾ ಕಡೆ ಹರಿದಾಡುತ್ತಿದೆ.
ಕಬ್ಜ ಸಿನಿಮಾಗಾಗಿ ಕಿಚ್ಚನ ಈ ಲುಕ್ ಎನ್ನಲಾಗುತ್ತಿದೆ. ಉಪೇಂದ್ರ ನಟನೆಯ ಕಬ್ಜ ಸಿನಿಮಾದಲ್ಲಿ ಕಿಚ್ಚನ ಫಸ್ಟ್ ಲುಕ್ ರಿಲೀಸ್ ಆಗಿತ್ತು. ಭಾರ್ಗವ ಭಕ್ಷಿ ಎನ್ನುವ ಪಾತ್ರದಲ್ಲಿ ಕಿಚ್ಚ ನಟಿಸುತ್ತಿದ್ದಾರೆ. ರೆಟ್ರೋ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಕಿಚ್ಚ ಲುಕ್ ಕೂಡ ಅಷ್ಟೆ ಇಂಪ್ರೆಸಿವ್ ಆಗಿದೆ. ಫಸ್ಟ್ ಲುಕ್ ಬಳಿಕ ಕಿಚ್ಚನ ಭಾಗದ ಚಿತ್ರೀಕರಣ ಸಂಪೂರ್ಣವಾಗಿರಲಿಲ್ಲ. ವಿಕ್ರಾಂತ್ ರೋಣ ಚತ್ರದಲ್ಲಿ ಬ್ಯುಸಿಯಾಗಿದ್ದ ಕಿಚ್ಚ ಇದೀಗ ಮತ್ತೆ ಕಬ್ಜ ಸೆಟ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾ ಬಳಿಕ ಸುದೀಪ್ ಯಾವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುಚೂಹಲ ಮೂಡಿಸಿದೆ.