ಸದ್ಯ ಈಗಾಗಲೇ “ಉಸಿರೇ ಉಸಿರೇ” ಚಿತ್ರವು ಕೊನೆಯ ಹಂತದ ಚಿತ್ರೀಕರಣ ದಲ್ಲಿದ್ದು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಚಿತ್ರತಂಡಕ್ಕೆ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿತ್ರತಂಡ ಅಭಿನಯ ಚಕ್ರವರ್ತಿ ಯನ್ನು ಭೇಟಿಯಾಗಿದ್ದು ಕಿಚ್ಚ ಕೂಡಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
“ಬಿಗ್ ಬಾಸ್” ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿಯ ಸಂಗೀತವಿದೆ.