ಖ್ಯಾತ ಕಿರುತೆರೆ ಹಾಗೂ ಚಲನಚಿತ್ರ ನಿರ್ದೇಶಕ ಕೆ.ಎನ್.ಮೋಹನ್ ಕುಮಾರ್ (56) ಅವರು ತೀವ್ರ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದ್ದಾರೆ. ಎನ್.ಆರ್.ಕಾಲೋನಿಯ ರಾಮಲೀಲಾ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಮೋಹನ್ ಅವರು, ಸ್ನಾನದ ಕೋಣೆಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಸಮೀಪದ ರಂಗ ದೊರೈ ಆಸ್ಪತ್ರೆಗೆ ಕುಟುಂಬ ಸದಸ್ಯರು ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೃತನ ಮೋಹನ್ ಕುಮಾರ್ ಅವರು ಖ್ಯಾತ ನಿರೂಪಕಿ ಹಾಗೂ ನಟಿ ವತ್ಸಲಾ ಮೋಹನ್ ಅವರ ಪತಿ. ಸಿನಿಮಾಟೋಗ್ರಾಫರ್ ಆಗಿಯೂ ಬಹಳ ಅಮೂಲ್ಯವಾದ ಕೆಲಸಗಳನ್ನು ಮಾಡುತ್ತಾ ಬಂದ ಮೋಹನ್ ಅವರು, ತಮ್ಮ ಮಕ್ಕಳ ಸಿನಿಮಾ ಬೊಂಬೆಯಾಟಕ್ಕೆ ಪ್ರಶಸ್ತಿಯನ್ನೂ ಪಡೆದಿದ್ದರು. ನಾಟಕ ರಂಗದಲ್ಲಿ ಮೋಹನ್ ಅವರದು ಬಹಳ ಸಕ್ರಿಯ ಪಾತ್ರ.
ಮೃತರು ಸಹೋದ್ಯೋಗಿಗಳು, ಅಭಿಮಾನಿಗಳು, ಸ್ನೇಹಿತರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮೊದಲು ಜಯನಗರ 3ನೇ ಬ್ಲಾಕ್ ಪೂರ್ವ 8ನೇ ಮುಖ್ಯರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ ಆತ್ಮೀಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.