ಚಿತ್ರೀಕರಣ ಮುಗಿಸಿ, ಎಡಿಟಿಂಗ್ ನಡೆಸುತ್ತಿದ್ದ ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಚಿತ್ರಕ್ಕೆ ಮೂರನೆಯ ಬಾರಿಗೆ ಕ್ಲೈಮ್ಯಾಕ್ಸ್ ಚಿತ್ರಿಸಿಕೊಳ್ಳಲಾಗಿದೆ. ಗಗನ ಚುಕ್ಕಿ ಜಲಪಾತದ ಮೇಲಿನಿಂದ ನೀರು ಧುಮುಕುವ ಅತ್ಯಂತ ಅಪಾಯಕಾರಿ ಸ್ಥಳದಲ್ಲಿ ಚಿತ್ರದ ಕ್ಲೈಮ್ಯಾಕ್ಸನ್ನು ಮರು ಚಿತ್ರೀಕರಿಸಿ ಕೊಳ್ಳಲಾಯಿತು. ಈ ಸಮಯದಲ್ಲಿ ಆಂಟ್ ಮ್ಯಾನ್, ಟ್ರೂ ಸ್ಪಿರಿಟ್, ಅಕ್ವ ಮ್ಯಾನ್ ಮೊದಲಾದ ಹಾಲಿವುಡ್ ಚಿತ್ರಗಳ VFX ಮತ್ತು ಗ್ರಾಫಿಕ್ಸ್ ತಂತ್ರಜ್ಞರು ಭಾಗಿಯಾಗಿದ್ದರು.
ಇದನ್ನೂ ಓದಿ: ’ರೇಸರ್’ ಸಿನಿಮಾದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್ ಪೋಸ್ಟರ್ ರಿಲೀಸ್
ನಂತರ ಯಲಹಂಕದ ಬಳಿ ಇರುವ ಸ್ಟುಡಿಯೋ 9 ರಲ್ಲಿ ಸತತ ಐದು ದಿನಗಳ ಕಾಲ ಹಿರಿಯ ನಟಿ ಶ್ರುತಿ, ನಾಯಕ ನಟ ಭರತ್ ಸೂರ್ಯ ಮತ್ತು ರಂಗಭೂಮಿ ಕಲಾವಿದ ಡುಂಡ್ಸಿ ಮೊದಲಾದವರು ಗ್ರೀನ್ ಮ್ಯಾಟ್ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ನಟಿ ಶ್ರುತಿಯವರು ನಿರ್ವಹಿಸುತ್ತಿರುವ ಕೊರಗಜ್ಜನ ಸಾಕು ತಾಯಿ ಬೈರಕ್ಕೆ ಬೈಕಡ್ತಿ ಯ ದೇವಸ್ಥಾನ ವು ಉಡುಪಿ ಬಳಿ ಇದ್ದು, ಕೊರಗಜ್ಜ ಮತ್ತು ಸಾಕುತಾಯಿ ಬೈಕಡ್ತಿಯ ಸಂಬಂಧದ ಕುತೂಹಲಕಾರಿ ಅಂಶ ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ
ಇದನ್ನೂ ಓದಿ: ಕೆಆರ್ಜಿ ಸ್ಟುಡಿಯೋಸ್ ತೆಕ್ಕೆಗೆ ಬಹುನಿರೀಕ್ಷಿತ ಮಲಯಾಳಂ ಸಿನೆಮಾ “ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್”
ಬಹುಕೋಟಿ ರುಪಾಯಿಗಳನ್ನು ಹೂಡಿ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ರವರು ಧೃತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ಕನ್ನಡ, ಮಲಯಾಳಂ ಹಾಗೂ ತುಳು ಭಾಷೆಗಳಲ್ಲಿ ನಿರ್ಮಿಸುತ್ತಿರುವ ಈ ಚಿತ್ರದ ಸಂಕಲನ ಕಾರ್ಯವನ್ನು ಸುರೇಶ್ ಅರಸ್ ಮತ್ತು ವಿದ್ಯಾಧರ್ ಶೆಟ್ಟಿ ಮುಗಿಸಿದ್ದಾರೆ. ಸಂಗೀತ ಸುಧೀರ್ – ಕೃಷ್ಣ ಅವರದು. ಡಿಓಪಿ ಯಾಗಿ ಪವನ್ ಕುಮಾರ್ ಕಾರ್ಯ ನಿರ್ವಹಿಸಿದ್ದಾರೆ. ಬೀರ್ ಬೇಡಿ, ಭವ್ಯ, ಸಂದೀಪ್ ಸೊಪರ್ಕರ್, ನವೀನ್ ಪಡಿಲ್ ಹೀಗೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.