ಬಹುನಿರೀಕ್ಷಿತ `ಚಿತ್ತಾರ ಸ್ಟಾರ್ ಅವಾರ್ಡ್ಸ್-2025’ರ ವೋಟಿಂಗ್ ಲೈನ್ ಓಪನ್ ಆಗಿದೆ, ಈ ಕೂಡಲೆ ನಿಮ್ಮ ನೆಚ್ಚಿನ ನಟ/ನಟಿ, ತಂತ್ರಜ್ಞರಿಗೆ ವೋಟ್ ಮಾಡಿ.
Send “Chittara” on WhatsApp to 73 5365 5365 or click the link http://wame.pro/chittara to cast your vote!
- ಆನೆ ಕೈಯಲ್ಲಿ ಬಿಡುಗಡೆಯಾಯಿತು ಮಡೆನೂರ್ ಮನು – ಮೌನ ಗುಡ್ಡೆಮನೆ ಅಭಿನಯದ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಹಾಡು. * .
ಇದೇ ಮೊದಲ ಬಾರಿಗೆ ಆನೆಯೊಂದು ಚಿತ್ರದ ಹಾಡೊಂದನ್ನು ಅನಾವರಣ ಮಾಡಿದೆ. ಆ ಸುಂದರ ಯುಗಳಗೀತೆ ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಏಪ್ರಿಲ್ 6.ರಂದು ಬೆ.10ಗಂಟೆಗೆ ಬಿಡುಗಡೆಯಾಗಲಿದೆ. ಹೌದು.
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ – ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕಾಗಿ ಯೋಗರಾಜ್ ಭಟ್ ಬರೆದಿರುವ “ಮನಸು ಹಾಡ್ತಿದೆ ವಯಸ್ಸು ಕಾಡ್ತದೆ” ಎಂಬ ಹಾಡು ತನ್ನ ಗಾಂಭೀರ್ಯದಿಂದಲೇ ಎಲ್ಲರ ಗಮನ ಸೆಳೆದಿರುವ ಗಜರಾಜನಿಂದ ಬಿಡುಗಡೆಯಾಗಿದೆ. ಮನೋಮೂರ್ತಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಟೀಸರ್ ಹಾಗೂ ಚಿತ್ರದ ಮೊದಲ ಹಾಡು “ನಮ್ ಪೈಕಿ ಒಬ್ಬ ಹೋಗ್ಬುಟ್ನಾ” ಜನರ ಮನ ತಲುಪಿದೆ.