Sandalwood Leading OnlineMedia

*ಖುಷಿ ಸಿನಿಮಾದ ಐದನೇ ಹಾಡು ರಿಲೀಸ್..ಹೇ ಹೆಂಡತಿ ಎಂದು ಹೆಜ್ಜೆ ಹಾಕಿದ ವಿಜಯ್ ದೇವರಕೊಂಡ*

ಸಮಂತಾ ಹಾಗೂ ವಿಜಯ್ ದೇವರಕೊಂಡ ನಟನೆಯ ಖುಷಿ ಸಿನಿಮಾದ ಐದನೇ ಹಾಡು ರಿಲೀಸ್ ಆಗಿದೆ. ಸಮಂತಾಗೆ ಹೇ ಹೆಂಡತಿ ಎನ್ನುತ್ತಾ ವಿಜಯ್ ಹೆಜ್ಜೆ ಹಾಕಿದ್ದಾರೆ. ಕನ್ನಡದಲ್ಲಿಯೂ ರಿಲೀಸ್ ಆಗಿರುವ ಈ ಹಾಡಿಗೆ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಮೆಲೋಡಿ ಹಾಡುಗಳಿಗೆ ಜನಪ್ರಿಯರಾಗಿರುವ ಹೇಷಾಂ ಅಬ್ದುಲ್ ವಹಾಬ್ ಈ ಸಿನಿಮಾದ ಹಾಡಿಗೂ ಟ್ಯೂನ್ ಹಾಕಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ನನ್ನ ರೋಜಾ ನೀನೇ, ಆರಾಧ್ಯ ಗೀತೆಯ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿವೆ. 

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಮೈತ್ರಿ ಮೂವಿ ಬ್ಯಾನರ್ ಈ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಸಮಂತಾ ಹಾಗೂ ನಾಗಚೈತನ್ಯ ನಟಿಸಿದ್ದ ‘ಮಜಿಲಿ’ ಸಿನಿಮಾದ ನಿರ್ದೇಶಕ ಶಿವ ನಿರ್ವಾಣ ಆಕ್ಷನ್ ಕಟ್ ಹೇಳಿದ್ದಾರೆ.

  1. ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ‘ಖುಷಿ’ ಸಿನಿಮಾವನ್ನು ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವೆನ್ನೆಲಾ ಕಿಶೋರ್, ರೋಹಿಣಿ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹೇಷಾಂ ಅಬ್ದುಲ್ ವಹಾಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

https://youtu.be/QZaXvpf_Mnw?si=LziSMC4Ssx0BdjDw

Share this post:

Translate »