Sandalwood Leading OnlineMedia

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ದೊಡ್ಮನೆ ಭೇಟಿಯಾದ ತೋಟಗಾರಿಕ ಇಲಾಖೆ

ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ದೊಡ್ಮನೆ ಭೇಟಿಯಾದ ತೋಟಗಾರಿಕ ಇಲಾಖೆ

ಈ ಬಾರಿಯ 212 ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ವಿಶೇಷವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಕ್ಷಾಂತರ ಜನರು ಆಗಮಿಸುವ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯ ಆಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶ್ವ ವಿಖ್ಯಾತ ಲಾಲ್ ಬಾಗ್ ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಈ ಬಾರಿ ಪ್ರದರ್ಶನ ಆಯೋಜಿಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು.

ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನವು ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ, ಡಾ.ಶಿವರಾಜಕುಮಾರ್ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು ಇಂದು ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ ವಿನಂತಿಸಲಾಯಿತು. ಪುನೀತ್ ರಾಜ್‌ಕುಮಾರ್ ಅವರ ಸಿನಿಮಾ, ವ್ಯಕ್ತಿತ್ವವನ್ನು ಆಧರಿಸಿರುತ್ತದೆ ಅಲ್ಲದೆ ಅಪ್ಪು ಅವರ ಗಾಜನೂರಿನ ಮನೆಯನ್ನು ಸಹ ಹೂವಿನಿಂದ ಅಲಂಕರಿಸಲಾಗುತ್ತದೆ”

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ ಬಾಗ್ ನಲ್ಲಿ ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ., ”ಆಗಸ್ಟ್ 05 ರಿಂದ ಆಗಸ್ಟ್ 15 ರ ವರೆಗೆ ಸ್ವಾತಂತ್ರ್ತೋತ್ಸವದ ಪ್ರಯುಕ್ತ ಲಾಲ್‌ಬಾಗ್‌ನಲ್ಲಿ ಪುಷ್ಪೋತ್ಸವ ಆಯೋಜಿಸಲಾಗುತ್ತಿದ್ದು, ಆಗಸ್ಟ್ 05 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪುಷ್ಪೋತ್ಸವವನ್ನು ಉದ್ಘಾಟನೆ ಮಾಡುತ್ತಾರೆ.

Share this post:

Translate »