Sandalwood Leading OnlineMedia

ನಟಿ ಲೀಲಾವತಿ ಆಸ್ಪತ್ರೆ ಮುಂದೆ ಪ್ರತಿಮೆ ನಿರ್ಮಿಸಲು ಮುಂದಾದ ಸರ್ಕಾರ

ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟಿ ಲೀಲಾವತಿ ಅವರಿಗೆ ರಾಜ್ಯ ಸರ್ಕಾರ ವಿಶೇಷವಾಗಿ ಗೌರವ ಸಲ್ಲಿಸಲು ಮುಂದಾಗಿದೆ.ಲೀಲಾವತಿ ಸಾವಿಗೆ ಮುನ್ನ ತಮ್ಮ ಸ್ವಂತ ವೆಚ್ಚದಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯೊಂದನ್ನು ನಿರ್ಮಿಸಿಕೊಟ್ಟಿದ್ದರು. ಇದನ್ನು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದರು.

ಸದನದಲ್ಲಿ ನಿನ್ನೆ ಲೀಲಾವತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಾ ಡಿಕೆ ಶಿವಕುಮಾರ್ ಹಿರಿಯ ನಟಿಯ ಸಾಮಾಜಿಕ ಕಳಕಳಿಯನ್ನು ಕೊಂಡಾಡಿದರು. ಜೊತೆಗೆ ಲೀಲಾವತಿ ಸ್ಮರಣಾರ್ಥ ಸರ್ಕಾರ ಕೈಗೊಳ್ಳಲಿರುವ ಕೆಲಸದ ಬಗ್ಗೆ ಮಾಹಿತಿ ನೀಡಿದರು.

ಲೀಲಾವತಿಯ ಕನಸಿನ ಪಶು ವೈದ್ಯಕೀಯ ಆಸ್ಪತ್ರೆ ಮುಂದೆ ಅವರ ಪ್ರತಿಮೆ ಸ್ಥಾಪಿಸಿ ಗೌರವಿಸಬೇಕು ಎಂದು ವಿರೋಧ ಪಕ್ಷದವರೂ ಆಗ್ರಹಿಸಿದ್ದರು. ಅವರ ಬೇಡಿಕೆಯನ್ನೂ ಗಣನೆಗೆ ತೆಗೆದುಕೊಂಡು ಸರ್ಕಾರ ಅಗತ್ಯ ಕ್ರಮ ಕೈಗೊಳ‍್ಳಲಿದೆ. ಪಶು ವೈದ್ಯಕೀಯ ಆಸ್ಪತ್ರೆ ಮುಂದೆ ಲೀಲಾವತಿಯವರ ಪ್ರತಿಮೆ ನಿರ್ಮಿಸಿ ಗೌರವಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Share this post:

Translate »