ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ ಬಹು ನಿರೀಕ್ಷಿತ “ಮಾಫಿಯಾ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಹೇಳದೆ ಯು\ಎ ಪ್ರಮಾಣಪತ್ರ ನೀಡಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ “ಮಾಫಿಯಾ” ಚಿತ್ರದ ಬಿಡುಗಡೆ ದಿನಾಂಕವನ್ನು ಸದ್ಯದಲ್ಲೇ ಘೋಷಿಸುವುದಾಗಿ ನಿರ್ಮಾಪಕ ಕುಮಾರ್ ತಿಳಿಸಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಬಿಡುಗಡೆಗೆ ಪ್ರಜ್ವಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಹಾಗೂ ಗಗನ್ ಭಡೇರಿಯಾ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
Ibbani Tabbida Ileyali Movie ; ತೆರೆಯ ತಬ್ಬಲಿದೆ ಇಳೆಯ ಅದ್ದೂರಿ ಪ್ರೇಮ ಕಾವ್ಯ
ನಟ ಶರಣ್ ಅವರಿಂದ ಅನಾವರಣವಾಯಿತು “ಲಂಗೋಟಿ ಮ್ಯಾನ್” ಚಿತ್ರದ ಟೀಸರ್ .