Sandalwood Leading OnlineMedia

ಅಜಯ್​ ಭೂಪತಿ ನಿರ್ದೇಶನದ ‘ಮಂಗಳಾವರಂ’ ಚಿತ್ರದ ಪೋಸ್ಟರ್​ ಬಿಡುಗಡೆ

‘ಆರ್​.ಎಕ್ಸ್​.100’ ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದವರು ನಿರ್ದೇಶಕ ಅಜಯ್​ ಭೂಪತಿ. ಆ ಚಿತ್ರದ ನಂತರ ಅವರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರವಾಗಿ, ‘ಮಂಗಳಾವರಂ’ ಎಂಬ ಹೊಸ ಚಿತ್ರವನ್ನು ಅವರು ಘೋಷಿಸಿದ್ದು, ಆ ಚಿತ್ರದ ಕಾನ್ಸಪ್ಟ್​ ಪೋಸ್ಟರ್​ ಇತ್ತೀಚೆಗೆ ಬಿಡುಗಡೆಯಾಗಿದೆ.

 

 

ರಿಲೀಸ್ ಆಯ್ತು, `ಕಬ್ಜ’ ಚಿತ್ರದ ವಿಶೇಷ ವರದಿ ಹೊತ್ತ `ಚಿತ್ತಾರ’ ಪತ್ರಿಕೆಯ ಕಲರ್ ಫುಲ್ ಕವರ್‌ಪೇಜ್ ಮತ್ತು ಪೋಸ್ಟರ್ 

‘ಮಂಗಳಾವರಂ’ ಚಿತ್ರವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್​ ಹಾಗೂ ಅಜಯ್​ ಭೂಪತಿ ಅವರ ಎ ಕ್ರಿಯೇಟಿವ್​ ವರ್ಕ್ಸ್​ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್​ ಭೂಪತಿ, ಈ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಅವರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರ ಬರೀ ತೆಲುಗುಗಷ್ಟೇ ಸೀಮಿತವಲ್ಲ, ತೆಲುಗಿನಲ್ಲಿ ನಿರ್ಮಾಣವಾಗಿ ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಡಬ್​ ಆಗಿ ಬಿಡುಗಡೆಯಾಗಲಿದೆ. ಈ ಮೂಲಕ ಇದೊಂದು ದಕ್ಷಿಣ ಭಾರತದ ಚಿತ್ರವಾಗಲಿದೆ. ಇದೊಂದು ವಿಭಿನ್ನ ಚಿತ್ರ ಎಂದು ಬಣ್ಣಿಸುವ ಅಜಯ್​, ‘ಭಾರತೀಯ ಚಿತ್ರರಂಗದಲ್ಲೇ ಇದುವರೆಗೂ ಯಾರೂ ಪ್ರಯತ್ನಿಸದ ಒಂದು ವಿಭಿನ್ನ ಅಂಶವನ್ನಿಟ್ಟುಕೊಂಡು ಚಿತ್ರ ಮಾಡುತ್ತಿದ್ದೇವೆ. ಈ ಚಿತ್ರದಲ್ಲಿ ಒಟ್ಟು 30 ಪಾತ್ರಗಳಿದ್ದು, ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ಇದೆ. ಪ್ರತಿಯೊಂದು ಪಾತ್ರವೂ ಕಥೆಯನ್ನು ಮುನ್ನಡೆಸುವುದಷ್ಟೇ ಅಲ್ಲ, ಒಟ್ಟಾರೆ ಕಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ’ ಎಂದು ಹೇಳಿದ್ದಾರೆ.

ಬಹುನಿರೀಕ್ಷಿತ `ಕಬ್ಜ’ ಚಿತ್ರದ ಮಾಸ್ ಸಾಂಗ್‌ಗೆ ಸಾಕ್ಷಿಯಾಯ್ತು ಶಿಡ್ಲಘಟ್ಟ; ಸ್ಟಾರ್ ನಿರ್ದೇಶಕ ಆರ್.ಚಂದ್ರುಗೆ ಶಿವಣ್ಣ ಸಾಥ್

 

ಇದೊಂದು ಪಕ್ಕಾ ದಕ್ಷಿಣ ಭಾರತದ ಚಿತ್ರ ಎನ್ನುವ ನಿರ್ಮಾಪಕರಾದ ಸ್ವಾತಿ ಗುಣಪತಿ ಮತ್ತು ಸುರೇಶ್​ ವರ್ಮ, ”ಆರ್​.ಎಕ್ಸ್​.100′ ಚಿತ್ರದಂತೆಯೇ, ಈ ಚಿತ್ರದ ಮೂಲಕವೂ ಅಜಯ್​ ಪ್ರೇಕ್ಷಕರಿಗೊಂದು ಅನಿರೀಕ್ಷಿತ ಸರ್​ಪ್ರೈಸ್​ ಕೊಡುತ್ತಾರೆ ಎಂಬ ನಂಬಿಕೆ ಇದೆ. ಕಥೆ ಅದ್ಭುತವಾಗಿ ರೂಪುಗೊಂಡಿದ್ದು, ಎಲ್ಲರಿಗೂ ಇಷ್ಟವಾಗುತ್ತದೆ. ಸದ್ಯ ಪ್ರೀ-ಪ್ರೊಡಕ್ಷನ್​ ಕೆಲಸಗಳು ಪ್ರಾರಂಭವಾಗಿದ್ದು, ಸದ್ಯದಲ್ಲೇ ಕಲಾವಿದರ ಆಯ್ಕೆ ಅಂತಿಮವಾಗಲಿದೆ’  ಎನ್ನುತ್ತಾರೆ ‘ಮಂಗಳಾವರಂ’ ಚಿತ್ರಕ್ಕೆ ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿದೆ, ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್​ ಯಡವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

Share this post:

Translate »