Sandalwood Leading OnlineMedia

‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗೋದು ಯಾವಾಗ ಗೊತ್ತಾ?

 

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಕುತೂಹಲ ಇತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಈ ಚಿತ್ರದಲ್ಲಿ ಸುದೀಪ್ ಜೊತೆ ವರಲಕ್ಷ್ಮೀ ಶರತ್‌ಕುಮಾರ್, ಸಂಯುಕ್ತಾ ಹೊರನಾಡು, ಸುನೀಲ್ ಮತ್ತು ಪ್ರಮೋದ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಅಪ್​ಡೇಟ್ ಕೊಡೋದಾಗಿ ನಿರ್ಮಾಪಕ ಕಲೈಪುಲಿ ಧಾನು ಅವರು ಸೆಪ್ಟೆಂಬರ್​ನಲ್ಲಿ ಅನೌನ್ಸ್ ಮಾಡಿದ್ದರು. ಆದರೆ, ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿರಲಿಲ್ಲ. ಇಂದು (ನವೆಂಬರ್ 27) ಸಂಜೆ ನಾಲ್ಕು ಗಂಟೆ ನಾಲ್ಕು ನಿಮಿಷಕ್ಕೆ ಚಿತ್ರದ ರಿಲೀಸ್ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ. ಅದಕ್ಕೂ ಮೊದಲೇ ಚಿತ್ರದ ರಿಲೀಸ್ ಡೇಟ್ ಲೀಕ್ ಆಗಿದೆ.

ಕೆಲವು ವರದಿಗಳ ಪ್ರಕಾರ ‘ಮ್ಯಾಕ್ಸ್’ ಸಿನಿಮಾದ ರಿಲೀಸ್ ಈ ವರ್ಷವೇ ಆಗಲಿದೆಯಂತೆ. ಹೌದು, ಡಿಸೆಂಬರ್ 26ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಇಂದು ಪಕ್ಕಾ ಮಾಹಿತಿ ಸಿಗುವ ನಿರೀಕ್ಷೆ ಇದೆ.

ಕ್ರಿಸ್​ಮಸ್ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಆದರೆ ಯಶಸ್ಸು ಸಿಗೋದು ಪಕ್ಕಾ ಎಂಬುದು ಅನೇಕರ ನಂಬಿಕೆ. ಈ ಮೊದಲು ರಿಲೀಸ್ ಆದ ‘ಕಿರಿಕ್ ಪಾರ್ಟಿ’, ‘ಕಾಟೇರ’ ಚಿತ್ರಗಳು ಭರ್ಜರಿ ಯಶಸ್ಸು ಕಂಡಿದ್ದವು. ಈ ಎಲ್ಲಾ ಸಿನಿಮಾಗಳು ರಿಲೀಸ್ ಆಗಿದ್ದು ಡಿಸೆಂಬರ್ ಅಂತ್ಯಕ್ಕೆ. ಅದೇ ರೀತಿ ‘ಮ್ಯಾಕ್ಸ್’ ಸಿನಿಮಾ ಕೂಡ ಡಿಸೆಂಬರ್ ಅಂತ್ಯಕ್ಕೆ ತೆರೆಗೆ ಬರುತ್ತಿದೆ ಎನ್ನಲಾಗಿದೆ.

ಇನ್ನು, ಡಿಸೆಂಬರ್ ಅಂತ್ಯಕ್ಕೆ ತೆರೆಗೆ ಬರಲು ಅನೇಕ ಸಿನಿಮಾಗಳು ರೆಡಿ ಆಗಿವೆ. ಅವೆಲ್ಲರಿಗೂ ‘ಮ್ಯಾಕ್ಸ್’ ಸಿನಿಮಾ ಶಾಕ್ ನೀಡಿದೆ. ಇನ್ನು, ಡಿಸೆಂಬರ್ 20ರಂದು ಉಪೇಂದ್ರ ನಟನೆಯ ‘ಯುಐ’ ಚಿತ್ರ ತೆರೆಗೆ ಬರುತ್ತಿದೆ. ಇದಾದ ಒಂದು ವಾರದ ಬಳಿಕ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಲಿದೆ.

‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್ ಜೊತೆ ವರಲಕ್ಷ್ಮೀ ಶರತ್​ಕುಮಾರ್, ಸಂಯುಕ್ತಾ ಹೊರನಾಡು, ಸುನೀಲ್, ಪ್ರಮೋದ್ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಜಯ್ ಕಾರ್ತಿಕೇಯನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ Anshu Movie Review: ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾ, ಆದರೆ?!

Share this post:

Related Posts

To Subscribe to our News Letter.

Translate »