Devaru Devaru – Lyrical Kannada Song | Mehbooba Movie | Manojavvam Aatreya, Shashi, Paavana, Mathews
ಬಿಗ್ ಬಾಸ್ ಖ್ಯಾತಿಯ ಶಶಿ ನಾಯಕನಾಗಿ ನಟಿಸಿರುವ “ಮೆಹಬೂಬ” ಚಿತ್ರಕ್ಕಾಗಿ ರಘುಶಾಸ್ತ್ರಿ ಅವರು ಬರೆದಿರುವ “ದೇವರು ದೇವರು” ಎಂಬ ಭಾವೈಕ್ಯತೆ ಸಾರುವ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. “ಸರಿಗಮಪ” ಖ್ಯಾತಿಯ ಮನೋಜವಂ ಆತ್ರೇಯ ಸುಮಧುರವಾಗಿ ಹಾಡಿರುವ ಈ ಗೀತೆಗೆ ಮ್ಯಾಥ್ಯೂಸ್ ಮನು ಸಂಗೀತ ನೀಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಪಾರ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಸ್ಕಂದ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪ್ರಸನ್ನ ಶ್ರೀನಿವಾಸ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನೂಪ್ ಆಂಟೊನಿ ನಿರ್ದೇಶಿಸುತ್ತಿದ್ದಾರೆ.ಕೇರಳದಲ್ಲಿ ನಡೆದ ನೈಜಘಟನೆಯೊಂದನ್ನು ಆಧರಿಸಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ. ಬೆಂಗಳೂರಿನಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ.
ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ರಘುಶಾಸ್ತ್ರಿ ರಚಿಸಿದ್ದಾರೆ. ಸಂಭಾಷಣೆಯನ್ನು ರಘುಶಾಸ್ತ್ರಿ ಬರೆದಿದ್ದಾರೆ.ಕಿರಣ್ ಹಂಪಾಪುರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ ನಿರ್ದೇಶನ ಹಾಗೂ ಕಲೈ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಶಶಿ, ಪಾವನ ಗೌಡ, ಕಬೀರ್ ದುಹಾನ್ ಸಿಂಗ್, ಸಲ್ಮಾನ್(ಕಿರಿಕ್ ಪಾರ್ಟಿ), ಬುಲೆಟ್ ಪ್ರಕಾಶ್, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಕಲ್ಯಾಣಿರಾಜು, ಸಂದೀಪ್, ಧನರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.