ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಹಾಡೊಂದರ ಚಿತ್ರೀಕರಣದೊಂದಿಗೆ ಮುಕ್ತಾಯವಾಗಿದೆ. ಅಂಡರ್ ವಾಟರ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.ಈ ಹಾಡಿನ ಚಿತ್ರೀಕರಣಕ್ಕಾಗಿ ” “ಮೋಕೊ ಬೋಟ್” ಕ್ಯಾಮರಾ ಬಳಸಲಾಗಿದೆ. ನನಗೆ ತಿಳಿದ ಕನ್ನಡ ಚಿತ್ರರಂಗದಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ಈ ಕ್ಯಾಮೆರಾ ಬಳಸಿರುವುದು ಇದೇ ಮೊದಲು ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್. ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವಿರುವ ಈ ಹಾಡಿನಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯಿಸಿದ್ದಾರೆ.
ಬಹುನಿರೀಕ್ಷಿತ ‘ಮೈಸೂರು ಡೈರೀಸ್’ ಡಿಸೆಂಬರ್ 9ಕ್ಕೆ ರಿಲೀಸ್
ಇತ್ತೀಚಿಗೆ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರ(2023 ರ ಫೆಬ್ರವರಿ 10) ತೆರೆಗೆ ಬರುತ್ತಿದೆ. ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಲ್ಲತ್ತಿ– ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.
ಪೃಥ್ವಿ ಅಂಬರ್, ಮಿಲನ ನಾಗರಾಜ್,ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ.