Sandalwood Leading OnlineMedia

*ಕುತೂಹಲ ಮೂಡಿಸಿದೆ “ಮಾಂಕ್ ದಿ ಯಂಗ್” ಚಿತ್ರದ ಟೀಸರ್*

ಕನ್ನಡ ಚಿತ್ರರಂಗದಲ್ಲೀಗ ಹೊಸಬರ ಹೊಸಪ್ರಯತ್ನಕ್ಕೆ ನೋಡುಗರ ಬೆಂಬಲ ಸಿಗುತ್ತಿದೆ.  “ಮಾಂಕ್ ದಿ ಯಂಗ್” ಚಿತ್ರ ಕೂಡ ಹೊಸಕಥೆಯೊಂದಿಗೆ ಕನ್ನಡ ಸೇರಿದಂತೆ ಆರುಭಾಷೆಗಳಲ್ಲಿ ಬರುತ್ತಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿದರು. ನಟ ಪ್ರಥಮ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು‌. ಚಿತ್ರದಲ್ಲಿ ನಟಿಸಿರುವ ಪ್ರಣಯಮೂರ್ತಿ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ :“COZ I LUV U” ಆಲ್ಬಂ ಹಾಡಿನ ಮೂಲಕ ವಿನೂತನ ಪ್ರಯೋಗ

“ಮಾಂಕ್ ದಿ ಯಂಗ್” ವಿಂಟೇಜ್ ಫ್ಯಾಮಿಲಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಇಂದು ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಅಂತಿಮ ಹಂತದಲ್ಲಿದೆ. ಇನ್ನು ಮೂರು ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡಕ್ಕೆ ನನ್ನ ಧನ್ಯವಾದ. ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸವಾಗದಂತಹ ಚಿತ್ರ ಮಾಡಿದ್ದೇವೆ.‌ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಮಾಸ್ಚಿತ್ ಸೂರ್ಯ. ಈ ಚಿತ್ರದ ನಿರ್ದೇಶಕ ಮಾಸ್ಚಿತ್ ಸೂರ್ಯ, ನನ್ನನ್ನು ಈ ಚಿತ್ರದಲ್ಲಿ ಅಭಿನಯಿಸಲು ಕಥೆ ಹೇಳುವುದಕ್ಕೆ ಕರೆದಿದ್ದರು. ಕಥೆ ಚೆನ್ನಾಗಿತ್ತು. ನಟನೆಗೆ ಹೋದ ನಾನು ನಿರ್ಮಾಪಕನಾದೆ. ನನ್ನೊಂದಿಗೆ ನನ್ನ ಸ್ನೇಹಿತರು ನಿರ್ಮಾಣಕ್ಕೆ ಜೊತೆಯಾದರು. ಇಂದು ಟೀಸರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ನಾನು ಸೇರಿದಂತೆ ಐದು ಜನ ನಿರ್ಮಾಪಕರು ಈ ಚಿತ್ರದಲ್ಲಿ ಅಭಿನಯಿಸಿದ್ದೇವೆ ಎಂದು ನಿರ್ಮಾಪಕರಲ್ಲೊಬ್ಬರಾದ  ರಾಜೇಂದ್ರನ್ ಹೇಳಿದರು.ನಿರ್ಮಾಪಕರಾದ ವಿನಯ್ ಬಾಬು ರೆಡ್ಡಿ, ಗೋಪಿಚಂದ್, ಲಾಲ್ ಚಂದ್ ಸಹ ಚಿತ್ರದ ಕುರಿತು ಮಾತನಾಡಿದರು.

ಇದನ್ನೂ ಓದಿ : ಪುನೀತ್, ರಮ್ಯಾ..ರಿಷಬ್..ರಕ್ಷಿತ್ ಸಾಥ್ ಕೊಟ್ಟ ಹಾಸ್ಟೆಲ್ ಹುಡುಗರಿಗೆ ‘ದೂದ್ ಪೇಡಾ’ಸಿಹಿ

ನಾವು ಸೀಮಿತವಾದ ಜೀವನ ನಡೆಸುತ್ತಿರುತ್ತೇವೆ. ಆದರೆ ಅದರ ಆಚೆ ಬಂದು ನೋಡಿದಾಗ ಬೇರೆ ಜೀವನ ಇದೆ. ಹಾಗೆ ನಮ್ಮ ಚಿತ್ರ ಕೂಡ. ಮಾಮೂಲಿ ಜಾನರ್‌ ಗಿಂತ ಸ್ವಲ್ಪ ಭಿನ್ನವಾದ ಚಿತ್ರ ಎನ್ನಬಹುದು. ‌ನಾನು ಹಾಗೂ ಮಾಸ್ಚಿತ್ ಸೂರ್ಯ ಮೊದಲು ಸಣ್ಣದಾಗಿ ಈ ಚಿತ್ರ ಆರಂಭ ಮಾಡಿದ್ದೆವು. ಆನಂತರ ನಾಲ್ಕು ಜನ ನಿರ್ಮಾಪಕರು ಜೊತೆಯಾದರು. ನಾನು ಕೂಡ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬ. ಹಾಗೆ ನಾಯಕ ಕೂಡ. ನೋಡುಗರು ನಮ್ಮ ಚಿತ್ರವನ್ನು ಮೆಚ್ಚಿಕೊಳ್ಳುವ ಭರವಸೆಯಿದೆ ಎಂದು ಸರೋವರ್ ತಿಳಿಸಿದರು.ನಾಯಕಿ ಸೌಂದರ್ಯ ಗೌಡ, ಸಂಕಲನಕಾರ ಧನುಷ್ ಎಲ್ ಬೇದ್ರೆ, ಹಿನ್ನೆಲೆ ಸಂಗೀತ ನೀಡಿರುವ  ಸ್ವಾಮಿನಾಥನ್ ಹಾಗೂ ವಿ ಎಫ್ ಎಕ್ಸ್ ಮಾಡಿರುವ ಜಯೇಂದ್ರ ವಾಕ್ವಾಡಿ ಚಿತ್ರದ ಕುರಿತು ಮಾತನಾಡಿದರು.

Share this post:

Translate »