ಮುಕೇಶ್ ಅಂಬಾನಿ – ನೀತು ಅಂಬಾನಿ ಪುತ್ರ ಅನಂತ್ ಅಂಬಾನಿಯ ಮದುವೆಯ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಕಳೆದ ಕೆಲವು ದಿನಗಳಿಂದಾನೇ ಮದುವೆಯ ಎಲ್ಲಾ ಕಾಯಗಳು ಶುರುವಾಗಿದ್ದು, ಅಂದಿನಿಂದ ಅದ್ದೂರಿಯಾಗಿಯೇ ನಡೆಸಿಕೊಂಡು ಬರುತ್ತಿದ್ದಾರೆ. ಅಂಬಾನಿ ಕುಟುಂಬದ ಮದುವೆ ಎಂದರೆ ಅದ್ದೂರಿತನಕ್ಕೆ ಅಲ್ಲೇನು ಕೊರತೆ ಇರುವುದಿಲ್ಲ. ಇದರ ಜೊತೆಗೆ ಇಂದು ಸಾಮೂಹಿಕ ವಿವಾಹ ಕಾರ್ಯ ನೆರವೇರಿಸುವ ಮೂಲಕ ಬಡವರ ಬಾಳಿಗೂ ಬೆಳಕಾಗಿದ್ದಾರೆ.
ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ಮದುವೆಗೂ ಮುಂಚಿತವಾಗಿ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಇಂದು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 50ಕ್ಕೂ ಹೆಚ್ಚು ಬಡ ಕುಟುಂಬದ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು. ಥಾಣೆಯ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‌ನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವು ದಂಪತಿಗಳ ಕುಟುಂಬಗಳನ್ನು ಪ್ರತಿನಿಧಿಸುವ ಸುಮಾರು 800 ಜನರ ಸಮ್ಮುಖದಲ್ಲಿ ನಡೆಯಿತು.ಅನಂತ್- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ. ಈ ಬಗ್ಗೆ ಅಂಬಾನಿ ಕುಟುಂಬ ಸಂಕಲ್ಪವನ್ನೇ ಮಾಡಿದ್ದಾರೆ.
ಸಾಮೂಹಿಕ ವಿವಾಹ ಸಂದರ್ಭದಲ್ಲಿ ಪ್ರತಿ ಜೋಡಿಗೂ ಮಂಗಳಸೂತ್ರ, ಮದುವೆಯ ಉಂಗುರಗಳು, ಮೂಗುತಿ, ತಾಳಿ ಸೇರಿದಂತೆ ಚಿನ್ನಾಭರಗಳನ್ನು ನೀಡಲಾಯಿತು. ಜೊತೆಗೆ ಕಾಲುಂಗುರ, ಕಾಲೆಜ್ಜೆಯಂಥ ಬೆಳ್ಳಿ ಆಭರಣಗಳನ್ನು ಸಹ ನೀಡಲಾಯಿತು. ಇದರ ಜತೆಗೆ ಪ್ರತಿ ವಧುವಿಗೆ ರೂ. 1.01 ಲಕ್ಷ ರೂಪಾಯಿಯನ್ನು ತವರು ಮನೆಯಿಂದ ನೀಡುವಂಥ ಸ್ತ್ರೀಧನದ ರೂಪದಲ್ಲಿ ಕೊಡಲಾಯಿತು. ಅಲ್ಲದೆ ಪ್ರತಿ ದಂಪತಿಗೂ ಒಂದು ವರ್ಷಕ್ಕೆ ಸಾಕಾಗುವಂಥ ದಿನಸಿ, ಗೃಹೋಪಯೋಗಿ ವಸ್ತುಗಳನ್ನು ಕೊಡಲಾಯಿತು.
36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟ್, ಮಿಕ್ಸರ್ ಮತ್ತು ಫ್ಯಾನ್, ಹಾಗೆಯೇ ಹಾಸಿಗೆ ಮತ್ತು ದಿಂಬುಗಳು ಇದ್ದವು. ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಆಹ್ವಾನಿತರು ವೀಕ್ಷಿಸಿದರು