Sandalwood Leading OnlineMedia

ಸೈಫ್‌ ಅಲಿಖಾನ್‌ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಅರೆಸ್ಟ್

ನಟ ಸೈಫ್ ಅಲಿಖಾನ್ ಮೇಲೆ ನಿನ್ನೆ ರಾತ್ರಿ  ಹಲ್ಲೆ ನಡೆದಿತ್ತು. ನಟನ ನಿವಾಸಕ್ಕೆ ನುಗ್ಗಿದ್ದ ದುಷ್ಕರ್ಮಿಯೊಬ್ಬ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಬಳಿಕ ಸೈಫ್‌ ಅಲಿ ಖಾನ್‌ ದೇಹದ ಭಾಗಗಳಿಗೆ ಚಾಕುವಿನಿಂದ ಇರಿದು ಓಡಿ ಹೋಗಿದ್ದ. ಅದರಿಂದ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್‌ ಅಲಿ ಖಾನ್‌ಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸೈಫ್ ಅಲಿಖಾನ್ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಅಪಾರ್ಟ್‌ಮೆಂಟ್ ಒಳಗೆ, ಹೊರಗೆ ಇದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಸಂಜೆ ವೇಳೆಗೆ ದುಷ್ಕರ್ಮಿಯೊಬ್ಬ ಫೈರ್ ಎಕ್ಸಿಟ್ ಮೆಟ್ಟಿಲು ಇಳಿದು ಓಡಿ ಹೋಗುತ್ತಿದ್ದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿತ್ತು. ಆತನ ಪತ್ತೆಗೆ ಬಾಂದ್ರಾ ಪೊಲೀಸರು ಬಲೆ ಬೀಸಿದ್ದರು. ಈ ಪ್ರಕರಣಕ್ಕೆ  ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಕೂಡ ಎಂಟ್ರಿಯಾದರು.

 

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್‌ ಸೇರಿದಂತೆ ಇಡೀ ಮುಂಬೈ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಸೂಕ್ತ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಸೈಫ್ ಅಲಿಖಾನ್ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ಅಪಾರ್ಟ್‌ಮೆಂಟ್ ಒಳಗೆ, ಹೊರಗೆ ಇದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದರು. ಸಂಜೆ ವೇಳೆಗೆ ದುಷ್ಕರ್ಮಿಯೊಬ್ಬ ಫೈರ್ ಎಕ್ಸಿಟ್ ಮೆಟ್ಟಿಲು ಇಳಿದು ಓಡಿ ಹೋಗುತ್ತಿದ್ದ ಸಿಸಿಟಿವಿ ದೃಶ್ಯಾವಳಿ ಬಹಿರಂಗವಾಗಿತ್ತು. ಆತನ ಪತ್ತೆಗೆ ಬಾಂದ್ರಾ ಪೊಲೀಸರು ಬಲೆ ಬೀಸಿದ್ದರು. ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಸೇರಿದಂತೆ ಇಡೀ ಮುಂಬೈ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿತ್ತು. ಸೂಕ್ತ ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. 20 ತಂಡಗಳಾಗಿ ಮುಂಬೈ ಪೊಲೀಸರು ದುಷ್ಕರ್ಮಿಯ ಹುಡುಕಾಟ ನಡೆಸಿದ್ದರು. ಕೊನೆಗೆ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Share this post:

Translate »