Sandalwood Leading OnlineMedia

‘S/O ಮುತ್ತಣ್ಣ’ ; ಮಾರ್ಚ್ ನಲ್ಲಿ ತೆರೆಗೆ ಬರಲು ಸಿದ್ದವಾಗುತ್ತಿದೆ ತಂದೆ – ಮಗನ ಬಾಂಧವ್ಯ ಸಾರುವ ಈ ಚಿತ್ರ.

.
ಜನವರಿ 29, ಡೈನಾಮಿಕ್ ಹೀರೊ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ ಅವರ ಹುಟ್ಟುಹಬ್ಬ. ಪ್ರಸ್ತುತ ಪ್ರಣಮ್ ಅವರು ನಾಯಕನಾಗಿ ನಟಿಸಿರುವ *’S/O ಮುತ್ತಣ್ಣ’ ಚಿತ್ರತಂಡ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ನಾಯಕ ಪ್ರಣಮ್ ದೇವರಾಜ್ ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತೊಂದು ಸಂತೋಷದ ವಿಷಯ ಹೊರಬಂದಿದೆ. S/O ಮುತ್ತಣ್ಣ’ ಚಿತ್ರತಂಡ ಹಾಗೂ ಪ್ರಣಮ್ ಅವರ ಕಾಂಬಿನೇಶನ್ ನಲ್ಲಿ ಸದ್ಯದಲ್ಲೇ ಮತ್ತೊಂದು ನೂತನ ಚಿತ್ರ ಸೆಟೇರಲಿದೆ.

ಈಗಾಗಲೇ ಟೀಸರ್ ಮೂಲಕ ಎಲ್ಲರ ಗಮನ ಸೆಳೆದಿರುವ, ತಂದೆ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ “S/O ಮುತ್ತಣ್ಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಈ ಚಿತ್ರದ ಟೀಸರ್ ಕರುನಾಡ ಚಕ್ರವರ್ತಿ ರಿಯಲ್ “S/O ಮುತ್ತಣ್ಣ” ಶಿವರಾಜಕುಮಾರ್ ಅವರಿಂದ ಅನಾವರಣಗೊಂಡಿತ್ತು. ಸದ್ಯದಲ್ಲೇ ಚಿತ್ರದ ಪ್ರಥಮ ಪ್ರತಿ ಸಿದ್ದವಾಗಲಿದೆ. ಮಾರ್ಚ್ ವೇಳೆಗೆ ತೆರೆಗೆ ಬರಲಿದೆ. ಬೆಂಗಳೂರು ಹಾಗೂ ಕಾಶಿಯಲ್ಲಿ ಚಿತ್ರೀಕರಣ ನಡೆದಿದೆ.

ಪುರಾತನ ಫಿಲಂಸ್ ಹಾಗೂ ಎಸ್ ಅರ್ ಕೆ ಫಿಲಂಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವನ್ನು ಶ್ರೀಕಾಂತ್ ಹುಣಸೂರು ನಿರ್ದೇಶಿಸಿದ್ದಾರೆ. ರಚನೆ ಹಾಗೂ ನಿರ್ದೇಶ‌ನ ಶ್ರೀಕಾಂತ್ ಹುಣಸೂರು ಅವರದೆ. ಶ್ರೀಕಾಂತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಪ್ರಣಮ್ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

Share this post:

Related Posts

To Subscribe to our News Letter.

Translate »