‘ತಾಂಡೆಲ್’ ಸಿನಿಮಾದಲ್ಲಿ ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಕೈ ಜೋಡಿಸಿದ್ದಾರೆ. ಇದೀಗ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ತಾಂಡೆಲ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ‘ತಾಂಡೆಲ್’ ಟ್ರೈಲರ್ ನೋಡಿದ ವೀಕ್ಷಕರಿಗೆ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಇದೇ ಸಿನಿಮಾದಲ್ಲಿ ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ರೊಮ್ಯಾಂಟಿಕ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕಥೆಯಲ್ಲಿ ರೊಮ್ಯಾಂಟಿಕ್ ಹೇಳಲು ಹೊರಟಿದ್ದಾರೆ. ಇನ್ನೂ ತಾಂಡೆಲ್ ಸಿನಿಮಾಗೆ ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ಪಡೆದ ಸಂಭಾವನೆ ಬಹಿರಂಗವಾಗಿದೆ.
‘ತಾಂಡೆಲ್’ ಸಿನಿಮಾಗಾಗಿ ನಟ ನಾಗಚೈತನ್ಯ ಬರೋಬ್ಬರಿ 15 ಕೋಟಿ ರೂಪಾಯಿಗಳನ್ನು ಸಂಭಾವನೆಯಾಗಿ ಪಡೆದುಕೊಂಡಿದ್ದಾರೆ. ಇದು ನಾಗಚೈತನ್ಯ ಅವರು ಅತ್ಯಧಿಕ ಸಂಭಾವನೆಗಳಲ್ಲಿ ಒಂದಾಗಿದೆ. ಇನ್ನೂ ಇದೇ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಸಾಯಿ ಪಲ್ಲವಿ 5 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.
ಗೀತಾ ಆರ್ಟ್ಸ್ ನಿರ್ಮಿಸಿದ ಮತ್ತು ಅಲ್ಲು ಅರವಿಂದ್ ಪ್ರಸ್ತುತಪಡಿಸಿದ ಈ ಸಿನಿಮಾವು ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ ಚಾರ್ಟ್‌ಬಸ್ಟರ್ ಹಾಡುಗಳನ್ನು ಒಳಗೊಂಡಿದೆ. ಈ ಸಿನಿಮಾಗೆ ಚಂದು ಮೊಂಡೆಟಿ ನಿರ್ದೇಶನ ಮಾಡಿದ್ದಾರೆ. ತೆಲುಗು, ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಈ ಸಿನಿಮಾ ಫೆ.7ರಂದು ಸಿನಿಮಾ ಬಿಡುಗಡೆಯಾಗಲಿದೆ.