Sandalwood Leading OnlineMedia

ಗಮನಸೆಳೆಯುತ್ತಿದೆ ವೆಂಕಟ್ ಭಾರದ್ವಾಜ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ `ನಗುವಿನ ಹೂಗಳ ಮೇಲೆ’ ಚಿತ್ರದ ಹಾಡು  

‘ಆಮ್ಲೆಟ್’, ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಅಭಿದಾಸ್, ಶರಣ್ಯ ಶೆಟ್ಟಿ ಮುಖ್ಯ ಭೂಮಿಕೆಯ ಈ ಚಿತ್ರ ಪ್ರೇಕ್ಷಕರೆದುರು ಬರಲು ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಇದೀಗ ಸಿನಿಮಾ ತಂಡ ಚಿತ್ರದ ಮೊದಲ ಹಾಡನ್ನು zee music ನಲ್ಲಿ ಬಿಡುಗಡೆ ಮಾಡಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಅರಳಿರುವ  ‘ಇರಲಿ ಬಿಡು ಈ ಜೀವ ನಿನಗಾಗಿ’ ರೋಮ್ಯಾಂಟಿಕ್ ಸಾಂಗ್ ಬಿಡುಗಡೆಯಾಗಿದೆ. ತಜೇಂಧರ್ ಸಿಂಗ್, ನಿಹಾರಿಕ ನಾಥ್ ‘ಇರಲಿ ಬಿಡು ಈ ಜೀವ ನಿನಗಾಗಿ’ ಹಾಡಿಗೆ ದನಿಯಾಗಿದ್ದು, ಲವ್ ಪ್ರಾನ್ ಮೆಹತಾ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿ ಬಂದಿದೆ. ಈ ಮೂಲಕ ಸಿನಿಮಾ ಪ್ರಚಾರ ಕಾರ್ಯವನ್ನು ಚಿತ್ರತಂಡ ಆರಂಭಿಸಿದೆ. ಸೆನ್ಸಾರ್ ಗೆ ರೆಡಿಯಾಗಿರುವ ಚಿತ್ರ  ಏಪ್ರಿಲ್ ನಲ್ಲಿ ಬೆಳ್ಳಿ ಪರದೆ ಮೇಲೆ ಬರಲಿದೆ.

ಲೋಕೇಶ್‌ ಕನಗರಾಜ್‌ &  ದಳಪತಿ ವಿಜಯ್‌ ಕಾಂಬಿನೇಶನ್‌ನ ಎರಡನೇ ಸಿನಿಮಾ

 

ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ವೆಂಕಟ್ ಭಾರದ್ವಾಜ್ ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಖ್ಯಾತಿಗಳಿಸಿರುವ ಅಭಿದಾಸ್, ಶರಣ್ಯ ಶೆಟ್ಟಿ ಚಿತ್ರದಲ್ಲಿ ನಾಯಕ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ದೊಡ್ಡ ಕಲಾವಿದರ ಬಳಗ ಚಿತ್ರದಲ್ಲಿದೆ. ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. 

 

Lovv Pran Mehta & Pramod Maravanthe

ಅತ್ಯುತ್ತಮ Trailerನಿಂದ ಗಮನಸೆಳೆಯುತ್ತಿದೆ `ಉತ್ತಮರು’

ಟಾಲಿವುಡ್ ನಲ್ಲಿ ಬೆಂಗಾಲ್ ಟೈಗರ್, ಪಂಥಂ, ಬಾಸ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ  ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ

 

 

 

 

 

 

 

Share this post:

Related Posts

To Subscribe to our News Letter.

Translate »