Sandalwood Leading OnlineMedia

ನ್ಯಾಚುರಲ್ ಸ್ಟಾರ್ ನಾನಿ  ‘ದಸರಾ’ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ ಟೀಸರ್ ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.

 

 

ಮಾಸ್ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ‘ದಸರಾ ಈಗಾಗಲೇ ಸಿನಿ ಪ್ರಿಯರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರ್ತಿರುವ ಚಿತ್ರದಲ್ಲಿ ನಾನಿ ಮಾಸ್ ಅವತಾರದಲ್ಲಿ ರಂಜಿಸಲು ರೆಡಿಯಾಗಿದ್ದು,  ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್ ಚಿತ್ರದ  ಮ್ಯಾಸಿವ್ ಟೀಸರ್ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ವಿಶೇಷ ವೀಡಿಯೋ ಮುಖಾಂತರ ಹಂಚಿಕೊಂಡಿದೆ.

 

ಬಿಡುಗಡೆಗೆ ಸಜ್ಜಾಗಿದೆ ಬಹುನಿರೀಕ್ಷಿತ `ಎಸ್.ಎಲ್.ವಿ’ ಚಿತ್ರ

 

ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ.

 

ರಥ ಕಿರಣ ನಟನೆಯ ‘ಅಭಿರಾಮಚಂದ್ರ’ ಫಸ್ಟ್ ಲುಕ್ ರಿಲೀಸ್- ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

 

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

 

Share this post:

Related Posts

To Subscribe to our News Letter.

Translate »