ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ನಯನತಾರಾ ಇತ್ತೀಚೆಗೆ ಬಹಳ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹಸಮಣೆ ಏರಿದ್ದ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್‌ಗೆ ವಿದೇಶಕ್ಕೆ ಹಾರಿದ್ದರು. ಲಾಂಗ್ ಗ್ಯಾಪ್ ತೆಗೆದುಕೊಳ್ಳದೇ ಬಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ನಯನತಾರಾ ಪಾಲ್ಗೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದೀಗ ಮುದ್ದಾದ ಚೆಂದದೊಂದು ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಜೂನ್ 9ರಂದು ಗುರುಹಿರಿಯರ ಸಮ್ಮುಖದಲ್ಲಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಸೆಮಣೆ ಏರಿದ್ದರು. ಬಳಿಕ ಮದುವೆಯ ಗ್ರ್ಯಾಂಡ್ ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದರು.
ಈಗ ಮದುವೆಗೂ ಮುನ್ನ ತೆಗೆದ ಪ್ರಿ ವೆಡ್ಡಿಂಗ್ ಫೋಟೋಶೂಟ್‌ನಿಂದ ಈ ಜೋಡಿ ಗಮನ ಸೆಳೆದಿದ್ದಾರೆ. ಈ ನಯನತಾರಾ ದಂಪತಿಯ ಪ್ರೀ ವೆಡ್ಡಿಂಗ್ ಫೋಟೋ ಮೂಲಕ ಸಖತ್ ವೈರಲ್ ಆಗುತ್ತಿದೆ.
ನಯನತಾರಾ ಮದುವೆಯ ಪ್ರತಿಯೊಂದು ವಿಚಾರಗಳು ಬಹಳ ಚರ್ಚೆಗೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ಅವರ ಮದುವೆಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೆಲ ವಿವಾದಗಳು ಹುಟ್ಟಿಕೊಂಡಿದ್ದವು. ಈಗ ಈ ಜೋಡಿಯ ಪ್ರೀ ವೆಡ್ಡಿಂಗ್ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿದೆ
ಬೀಚ್‌ನ ಬದಿಯಲ್ಲಿ ಈ ಜೋಡಿ ರೊಮ್ಯಾಂಟಿಕ್ ಫೋಟೋಗೆ ಪೋಸ್ ಕೊಟ್ಟಿದ್ದು, ವಿಘ್ನೇಶ್ ಶಿವನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಸಹ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.