ಗಾಡ್ ಆಫ್ ಮಾಸ್ ಎಂದೇ ಕರೆಸಿಕೊಳ್ಳೋ ತೆಲುಗು ನಟ ನಂದಮುರಿ ಬಾಲಕೃಷ್ಣ 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕ್ರೇಜಿ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ. NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದು, ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್ ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಕೊನೆಯ ಹಂತದದತ್ತ ‘ಅನ್ ಲಾಕ್ ರಾಘವ’
ಬಾಲಕೃಷ್ಣ ಅಭಿನಯದ 108ನೇ ಸಿನಿಮಾ ಇದಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಈ ಚಿತ್ರ ಮೂಡಿ ಬರ್ತಿದೆ. ಸದ್ಯದಲ್ಲೇ ಟೈಟಲ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ. ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದ್ದು, ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಜನವರಿ 6ಕ್ಕೆ ಮರೆಯದೆ ನೋಡಿ “ಮರೆಯದೆ ಕ್ಷಮಿಸು “
ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ. ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್. ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.