Sandalwood Leading OnlineMedia

*ಜುಲೈ 21ಕ್ಕೆ ತೆರೆಗೆ ಬರ್ತಿದೆ ಹೊಸಬರ ‘ನಿಮ್ಮೆಲ್ಲರ ಆರ್ಶೀರ್ವಾದ’..ಯುವ ಸಿನಿಮೋತ್ಸಾಹಿಗಳ ಮೇಲೆ ಇರಲಿ ನಿಮ್ಮ ಆಶೀರ್ವಾದ*

ಕನ್ನಡದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ನಿಮ್ಮೆಲ್ಲರ ಆಶೀರ್ವಾದ. ವರುಣ್ ಸಿನಿ ಕ್ರಿಯೇಷನ್ ಮೊದಲ ಪ್ರಯತ್ನದ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ನಿಮ್ಮೆಲ್ಲರ ಆಶೀರ್ವಾದ ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಗೆ ಬರ್ತಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಈ ಸಿನಿಮಾ ನಿರ್ಮಾಣ ಮಾಡಿದ್ದು, ಇದು ಇವರ ಮೊದಲ ಕನಸು..ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಟ್ಟಿಗೆ ಒಂದಷ್ಟು ವಿಷಯವನ್ನು ಹಂಚಿಕೊಂಡಿದೆ.

ಇನ್ನೂ ಓದಿ  *ಸೆಟ್ಟೇರಿದ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಹೊಸ ಸಿನಿಮಾ…ಚೆನ್ನೈನಲ್ಲಿ ’ಜೀನಿ’ ಅದ್ಧೂರಿ ಮುಹೂರ್ತ*

ನಿರ್ಮಾಪಕರಾದ ವರುಣ್ ಹೆಗ್ಡೆ ಮಾತನಾಡಿ, ನನ್ನ ಸ್ನೇಹಿತ ಕತೆ ಬರೆಯುತ್ತಿದ್ದ, ಕತೆ ಕೇಳಿ ಖುಷಿ ಆಯ್ತು. ಕೊರೋನಾ ಬಂದು ಎಲ್ಲಾ ಜೀವನದ ಮೇಲೆ ಪರಿಣಾಮ ಬೀರಿತು. ಜನರಿಗೆ ಎಂಟರ್ಟೈನ್ಮೆಂಟ್ ಈ ಸಿನಿಮಾ ಹಾಸ್ಯಸ್ಪದ ರೀತಿಯಲ್ಲಿ ಬರೆಯಲಾಗಿದೆ. ಈ ಚಿತ್ರವನ್ನು ಒಂದೊಳ್ಳೆ ಟೈಮ್ ಗೆ ತಂದು ಒಪ್ಪಿಸಬೇಕು ಎಂದುಕೊಂಡಿದ್ದೆವು. ಇದೊಂದು ಫ್ಯಾಮಿಲಿ ಎಂಟರ್ ಟೈನರ್. ನನ್ನ  ಹಾಗು ನಿರ್ದೇಶಕನ ಸ್ನೇಹಕ್ಕಿಂತ ಕತೆ ನನಗೆ ಇಷ್ಟವಾಯ್ತು. ಹೀಗಾಗಿ ನಿಮ್ಮೆಲ್ಲರ ಆಶೀರ್ವಾದ ಸಿನಿಮಾ ಮಾಡಿದ್ದೇನೆ.

ನಿರ್ದೇಶಕ ರವಿಕಿರಣ್‌ ಮಾತನಾಡಿ, ಸುಂದರ-ಸರಳ ಕತೆಯನ್ನು ಎಣೆದಿದ್ದೇವೆ. ಪ್ರತಿಯೊಬ್ಬರಿಗೂ ಸಿನಿಮಾ ಇಷ್ಟಪಡಬೇಕು. ಅರ್ಥ ಮಾಡಿಕೊಳ್ಳಬೇಕು ಎಂಬ ರೀತಿಯಲ್ಲಿ ಸಿನಿಮಾ ಮಾಡಿದ್ದೇವೆ. ಇತ್ತೀಚೆಗಿನ ವರ್ಷಗಳಲ್ಲಿ ತುಂಬಾ ಜಾನರ್ ಗಳ ಬಗ್ಗೆ ಯೋಚನೆ ಮಾಡುತ್ತಿದ್ದೆ. ಫ್ಯಾಮಿಲಿ ಡ್ರಾಮಾ ಇದ್ದಾವೆ. ಆದ್ರೆ ಮೊದಲಿನಿಂದ ಕೊನೆತನಕ ಸಿಂಪಲ್ ಆಗಿ ಎಂಟರ್ ಟೈನ್ ಡ್ರಾಮಾಗಳು ಇತ್ತೀಚೆಗೆ ಕಡಿಮೆಯಾಗಿವೆ ಎಂದು ಈ ಕತೆ ಬರೆದಿದ್ದೇವೆ. ಈಗ ಸಿನಿಮಾ ರಿಲೀಸ್ ಹಂತದಲ್ಲಿದೆ. ಇಡೀ ಫ್ಯಾಮಿಲಿ ಕುಳಿತುಕೊಂಡು ನೋಡುವ ಚಿತ್ರ ಇದಾಗಿದ್ದು, ಇದೇ ಜುಲೈ 21ಕ್ಕೆ ತೆರೆಗೆ ಬರ್ತಿದೆ. ಈ ಚಿತ್ರದ ಮೇಲೆ ನಿಮ್ಮ ಆಶೀರ್ವಾದ ಇರಲಿ ಎಂದರು.

ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್‌ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.ನಿಮ್ಮೆಲ್ಲರ ಆಶೀರ್ವಾದ ಸಿನಿಮಾಗೆ ಯುವ ನಿರ್ದೇಶಕ ರವಿಕಿರಣ್‌ ಆಕ್ಷನ್ ಕಟ್ ಹೇಳಿದ್ದು, ಸರವಣನ್‌ ಜಿ.ಎನ್‌.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ,   ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ. ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು 21 ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ.

Share this post:

Related Posts

To Subscribe to our News Letter.

Translate »