ರಿಯಾಲಿಟಿ ಶೋ ಕಾರ್ಯಕ್ರಮದ ಮೂಲಕ ಪರಿಚಿತವಾದ ನಟಿ ನಿವೇದಿತಾ ಗೌಡ ಮೊದಲಿನಿಂದಲೂ ಕೂಡ ಕಿರುತೆರೆಯಲ್ಲಿ ಸಕ್ರಿಯವಾಗಿದ್ದಾರೆ. ಹಲವು ಕಾರ್ಯಕ್ರಮಗಳ ಮೂಲಕ ನಿವೇದಿತಾ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕೂಡ ನಿವೇದಿತಾ ಗೌಡ ಹೆಚ್ಚು ಸಕ್ರಿಯವಾಗಿ ಇರುವುದರ ಜೊತೆಗೆ, ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ.
https://www.instagram.com/p/CcP0xKmIZc3/
ನಿವೇದಿತ ಗೌಡ ಇತ್ತೀಚೆಗೆ ಸುದ್ದಿಯಾಗಿದ್ದು, ಮಿಸೆಸ್ ಇಂಡಿಯಾ ಸ್ಪರ್ಧೆಯ ಮೂಲಕ. ಈ ಸ್ಪರ್ಧೆಯಲ್ಲಿ ನಿವೇದಿತಾ ಭಾಗವಹಿಸಿದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಈ ಬಗ್ಗೆ ನಿವೇದಿತಾ ಗೌಡ ಕೂಡ ಖುಷಿಯಲ್ಲಿ ಹಂಚಿಕೊಂಡಿದ್ದಾರೆ. ನಿವೇದಿತಾ ಗೌಡ ಸಿನಿಮಾದಲ್ಲಿ ನಟಿಸಿಲ್ಲ, ಆದರೆ ಕಿರುತೆಯಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ನಿವೇದಿತಾ ಮಿಸೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿಯಾಗಿ ಗೆದ್ದು ಬಂದಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಂತಸದ ವಿಚಾರವಾಗಿದೆ.
https://www.instagram.com/p/Cdv-__vo7Oz/
ನಟಿ ನಿವೇದಿತಾ ಗೌಡ ನಾಯಾಕಿಯಾಗಿ ಅಭಿನಯಿಸುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆನಿವೇದಿತಾ ಸಿನಿಮಾಗಳಲ್ಲಿ ಯಾವಾಗ ನಟಿಸುತ್ತಾರೆ ಎನ್ನುವುದಕ್ಕೆ ಈಗ ಉತ್ತರ ಸಿಕ್ಕಿದೆ. ನಿವೇದಿತಾ ಗೌಡ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
https://www.instagram.com/p/CfEO9_3Jzlz/
ಆದರೆ ಕನ್ನಡದಲ್ಲಿ ಅಲ್ಲ. ಬದಲಿಗೆ ತೆಲುಗಿನಲ್ಲಿ, ಈ ಬಗ್ಗೆ ಮಾತನಾಡಿರುವ ನಿವೇದಿತಾ ಕನ್ನಡದಲ್ಲಿ ಯಾಕೆ ನಟಿಸುತ್ತಿಲ್ಲ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. “ನಾನು ಕನ್ನಡ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದೇನೆ. ಆದರೆ ಕನ್ನಡ ಸಿನಿಮಾಗಳಲ್ಲಿ ಅವಕಾಶ ಸಿಕ್ಕಲ್ಲ ಅದಕ್ಕೆ ಅಭಿನಯಿಸುತ್ತಿಲ್ಲ. ಇಲ್ಲಿ ತನಕ ಯಾವುದೆ ಅವಕಾಶ ಬಂದಿಲ್ಲ. ಹಾಗೊಂದು ವೇಳೆ ಕನ್ನಡದಲ್ಲಿ ಅವಕಾಶ ಸಿಕ್ಕಿದ್ದರೆ, ಖಂಡಿತಾ ಸಿನಿಮಾ ಮಾಡುತ್ತೇನೆ.” ಎಂದಿದ್ದಾರೆ.
https://www.instagram.com/p/CgbjftBp29J/