Sandalwood Leading OnlineMedia

ಡಿಸೆಂಬರ್ 30ಕ್ಕೆ ಪದವಿಪೂರ್ವ

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರು ಜಂಟಿಯಾಗಿ ನಿರ್ಮಿಸಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ ‘ಪದವಿಪೂರ್ವ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಫ್ರೆಂಡ್ಶಿಪ್ ಸಾಂಗ್ ಮೂಲಕ ಈಗಾಗಲೇ ಭರ್ಜರಿ ಸದ್ದು ಮಾಡಿರುವ ಚಿತ್ರ ಇದೇ ಡಿಸೆಂಬರ್ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶರತ್ ಲೋಹಿತಾಶ್ವ, ರಂಗಾಯಣ ರಘು, ರಾಮಾರಾಮಾರೆ ಖ್ಯಾತಿಯ ನಟರಾಜ್ ಭಟ್ ನಟಿಸಿದ್ದು ಯೋಗರಾಜ್ ಭಟ್, ನಟಿ ಅದಿತಿ ಪ್ರಭುದೇವ, ದಿವ್ಯ ಉರುಡುಗ, ಪ್ರಭು ಮುಂದ್‌ಕುರ್, ಶ್ರೀ ಮಹದೇವ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

 

`ತಿಮ್ಮನ ಮೊಟ್ಟೆಗಳು’ ಚಿತ್ರೀಕರಣ ಮುಕ್ತಾಯ

ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ವಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದ್ದಾರೆ. ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕಣ್ಚಳಕ ಹಾಗು ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಇನ್ನಷ್ಟು ಶ್ರೀಮಂತಗೊಳಿಸಿದೆ.

Share this post:

Related Posts

To Subscribe to our News Letter.

Translate »