Sandalwood Leading OnlineMedia

*ಚೇತನ್ ಚಂದ್ರ ನಾಯಕರಾಗಿ ನಟಿಸಿರುವ “ಪ್ರಭುತ್ವ” ಚಿತ್ರದಿಂದ ಹೊರಬಂತು ಮೆಲೋಡಿ ಸಾಂಗ್*

ಮೇಘಡಹಳ್ಳಿ ಡಾ||ಶಿವಕುಮಾರ್ ಅರ್ಪಿಸುವ, ರವಿರಾಜ್ ಎಸ್ ಕುಮಾರ್ ನಿರ್ಮಿಸಿರುವ ಹಾಗೂ ಆರ್ ರಂಗನಾಥ್ ನಿರ್ದೇಶನದಲ್ಲಿ ಚೇತನ್ ಚಂದ್ರ ನಾಯಕರಾಗಿ ನಟಿಸಿರುವ “ಪ್ರಭುತ್ವ” ಚಿತ್ರದಿಂದ “ನೀನೇನಾ ನೀನೇನಾ” ಎಂಬ ಮೆಲೋಡಿ ಸಾಂಗ್ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಇತ್ತೀಚೆಗೆ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು.
“ಪ್ರಭುತ್ವ” ಚಿತ್ರ ನನ್ನ ಸಿನಿಪಯಣದಲ್ಲೇ ಬಿಗ್ ಬಜೆಟ್ ಚಿತ್ರ ಎನ್ನಬಹುದು. ಇದಕ್ಕೆ ಕಾರಣ ನಿರ್ಮಾಪಕರು. ಯಾವುದಕ್ಕೂ ಕೊರತೆ ಇಲ್ಲದೆ ನಿರ್ಮಾಣ‌ ಮಾಡಿದ್ದಾರೆ. ಇನ್ನು, ನಿರ್ದೇಶಕ ರಂಗನಾಥ್ ಚಿತ್ರವನ್ನು ಅದ್ಭುತವಾಗಿ ನಿರ್ದೇಶಿಸಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಹಾಡು ಬಿಡುಗಡೆ ಸಮಾರಂಭ ಆಗಿರುವುದರಿಂದ, ಹಾಡಿನ ಬಗ್ಗೆ ಹೇಳುತ್ತೇನೆ. ನಿರ್ದೇಶಕ ಹರಿ ಸಂತೋಷ್ ಈ ಹಾಡನ್ನು ಬರೆದಿದ್ದು, ಕಾರ್ತಿಕ್ ಹಾಗೂ ಸುಪ್ರಿಯಾ ರಾಮ್ ಸೊಗಸಾಗಿ ಹಾಡಿದ್ದಾರೆ. ಎಮಿಲ್ ಅಷ್ಟೇ ಚೆನ್ನಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಅವರ ಛಾಯಾಗ್ರಹಣ ಕೂಡ ಸುಂದರವಾಗಿದೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆಯಾಗಲಿದೆ. ನನ್ನ ಜೊತೆ‌ ನಟಿಸಿರುವ ಎಲ್ಲಾ ಕಲಾವಿದರು ಉತ್ತಮವಾಗಿ ನಟಿಸಿದ್ದಾರೆ ಎಂದು ನಾಯಕ ಚೇತನ್ ಚಂದ್ರ ಹೇಳಿದರು.

‘ಯುವ’ಪರ್ವಕ್ಕೆ ನಾಂದಿ!
ನಾನು ಈ ಹಿಂದೆ “ಅರಿವು” ಹಾಗೂ “ಕೂಗು” ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದೆ. ಇದು ಮೂರನೇ ಚಿತ್ರ. ನಿರ್ಮಾಪಕ ರವಿರಾಜ್ ಅವರ ತಂದೆ ಮೇಘಡಹಳ್ಳಿ ಡಾ|| ಶಿವಕುಮಾರ್ ಅವರೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸಂಭಾಷಣೆ ವಿನಯ್ ಅವರದು. ಎಮಿಲ್ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. “ಮತದಾನ” ದ ಮಹತ್ವ ಸಾರುವ ಚಿತ್ರ ಅಂತ ಹೇಳಬಹುದು. ಚೇತನ್ ಚಂದ್ರ, ಪಾವನ, ಶರತ್ ಲೋಹಿತಾಶ್ವ, ವಿಜಯ್ ಚೆಂಡೂರ್, ಡ್ಯಾನಿ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಉತ್ತಮ ಕಾರ್ಯವೈಖರಿಯಿಂದ ಚಿತ್ರ ಚೆನ್ನಾಗಿ ಬಂದಿದೆ. ‌ಮುಂದಿನ ದಿನಗಳಲ್ಲಿ ಇನ್ನೂ ಎರಡು ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ರಂಗನಾಥ್.
ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕಿ ಪಾವನ, ಇಂದು ಬಿಡುಗಡೆಯಾಗಿರುವ ಹಾಡು ತುಂಬಾ ಚೆನ್ನಾಗಿದೆ ಎಂದರು.
ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಮೊದಲು ಮೊಲೋಡಿ ಸಾಂಗ್ ಬಿಡುಗಡೆಯಾಗಿದೆ. ಕಾರ್ತಿಕ್ ಹಾಗೂ ಸುಪ್ರಿಯಾರಾಮ್ ಈ ಹಾಡನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಎಮಿಲ್ ಮಾಹಿತಿ ನೀಡಿದರು.

 

ಅಪ್ಪು ಅಭಿಮಾನಿಗಳಿಂದ 13 ಟೀಸರ್ ಬಿಡುಗಡೆ

ನಟರಾದ ಶರತ್ ಲೋಹಿತಾಶ್ವ, ವಿಜಯ್ ಚೆಂಡೂರ್, ಡ್ಯಾನಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣದ ಬಗ್ಗೆ ಮಾಹಿತಿ ನೀಡಿದರು.
ಕಥೆ ಬರೆದಿರುವ ಮೇಘಡಹಳ್ಳಿ ಡಾ|| ಶಿವಕುಮಾರ್ ಮುಂದಿನ ದಿನಗಳಲ್ಲಿ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು. ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡದ ಪ್ರತಿಯೊಬ್ಬರಿಗೂ ನಿರ್ಮಾಪಕ ರವಿರಾಜ್ ಎಸ್ ಕುಮಾರ್ ಧನ್ಯವಾದ ತಿಳಿಸಿದರು.

Share this post:

Related Posts

To Subscribe to our News Letter.

Translate »