ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ಇಂದು ರಿಲೀಸ್ ಆಗಿದೆ. ಖ್ಯಾತ ಗಾಯಕಿ ಅನನ್ಯ ಭಟ್ ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ರಾಘು ಶಿವಮೊಗ್ಗ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಐದು ಕಥೆಗಳನ್ನು ಬೆಸೆಯುವಂತಹ ಮತ್ತು ಆ ಆಶಯವನ್ನು ಹಿಡಿದಿಡುವಂತಹ ಗೀತೆ ಇದಾಗಿದೆ.
ಕುತೂಹಲ ಮೂಡಿಸಿದೆ “ಗ್ರೇ ಗೇಮ್ಸ್” ಚಿತ್ರದ ಟೀಸರ್
ಈಗಾಗಲೇ ಪೆಂಟಗನ್ ಸಿನಿಮಾ ಟ್ರೈಲರ್ ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ, ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ “ಶಿವಾಜಿ ಸುರತ್ಕಲ್ 2” ಟ್ರೇಲರ್
ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ. ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್, ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.